ಸುಚಿತ್ರ ಥಿಯೇಟರ್‌ನಲ್ಲಿ“ ಕಲ್ಜಿಗ“ ಬಿಡುಗಡೆ

ಮಂಗಳೂರು : ಮಲ್ಟಿಫ್ಲೆಕ್ಸ್‌ನಲ್ಲಿ ಬಿಡುಗಡೆಗೊಂಡು ಜನಮೆಚ್ಚುಗೆ ಪಡೆಯುತ್ತಿರುವ ”ಕಲ್ಜಿಗ“ ಸಿನಿಮಾ ನಗರದ ಸುಚಿತ್ರ ಥಿಯೇಟರ್‌ನಲ್ಲಿ ಶುಕ್ರವಾರ ಮುಂಜಾನೆ ಬಿಡುಗಡೆಗೊಂಡಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಬಹಳ ಸಮಯದ ಬಳಿಕ ಸುಚಿತ್ರ ಥಿಯೇಟರ್‌ನಲ್ಲಿ ತುಳುನಾಡ ಕಲಾವಿದರ ಸಿನಿಮಾ ಬಿಡುಗಡೆಯಾಗುತ್ತಿದೆ. ಇನ್ನು ಮುಂದೆಯೂ ಇಲ್ಲಿ ತುಳು ಸಿನಿಮಾಗಳ ಪ್ರದರ್ಶನಕ್ಕೆ ಅವಕಾಶ ನೀಡುವುದಾಗಿ ಮಾಲಕರು ಹೇಳಿದ್ದಾರೆ. ಅವರಿಗೆ ಅಭಿನಂದನೆಗಳು” ಎಂದರು.
ಡಾ. ದೇವದಾಸ್ ಕಾಪಿಕಾಡ್ ಮಾತಾಡಿ, “ತುಳು ಸಿನಿಮಾಗಳಿಗೆ ಸುಚಿತ್ರ ಥಿಯೇಟರ್‌‌ನಲ್ಲಿ ಅವಕಾಶ ನೀಡುತ್ತಿಲ್ಲ ಎಂಬ ಬೇಸರ ಇತ್ತು. ಅದು ನಿವಾರಣೆಯಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಜನರು ಇಲ್ಲಿಗೆ ಬಂದು ಸಿನಿಮಾ ವೀಕ್ಷಿಸಿ ಕಲ್ಜಿಗ ಸಿನಿಮಾವನ್ನು ಗೆಲ್ಲಿಸಿ” ಎಂದರು.

ಪ್ರಕಾಶ್ ಪಾಂಡೇಶ್ವರ್ ಮಾತಾಡಿ, “ಕಲ್ಜಿಗ ಸಿನಿಮಾ ನಾನು ನೋಡಿದ್ದೇನೆ. ಸಿನಿಮಾದಲ್ಲಿ ನಟಿಸಿರುವ ಎಲ್ಲರೂ ಕಷ್ಟಪಟ್ಟು ಕೆಲಸ ಮಾಡಿದ್ದಾರೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ” ಎಂದರು.

ವೇದಿಕೆಯಲ್ಲಿ ನಟ ಅರ್ಜುನ್ ಕಾಪಿಕಾಡ್, ಥಿಯೇಟರ್ ಮಾಲಕ ಪ್ರಶಾಂತ್, ನಿರ್ಮಾಪಕ ಶರತ್ ಕುಮಾರ್ ಎ.ಕೆ., ಶರ್ಮಿಳಾ ಕಾಪಿಕಾಡ್, ಮಾಧ್ಯಮ ಅಕಾಡೆಮಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಜ್ಯೋತಿಷ್ ಶೆಟ್ಟಿ, ಭೋಜರಾಜ್ ವಾಮಂಜೂರ್, ಅನೂಪ್ ಸಾಗರ್, ಕಾವ್ಯ ಅರ್ಜುನ್ ಕಾಪಿಕಾಡ್, ಸದಾಶಿವ ಅಮೀನ್, ರಂಜನ್ ಬೋಳೂರು, ನಿರ್ದೇಶಕ ಸುಮನ್ ಸುವರ್ಣ, ಮಾಧವ ಶೆಟ್ಟಿ ಬಾಳ ಉದಯ ಆಚಾರ್ಯ, ಆನಂದ ಬಂಗೇರ, ಶನಿಲ್ ಗುರು, ಶಾಂತಾರಾಮ್ ಮತ್ತಿತರರು ಉಪಸ್ಥಿತರಿದ್ದರು

Related posts

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours

ಕಚೇರಿಯ ಎದುರು ನಿಲ್ಲಿಸಿದ್ದ ಬೈಕ್‌ ಕಳವು