ಕನಕದಾಸರ ಸಂದೇಶಗಳು ಸರ್ವವ್ಯಾಪ್ತಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಕನಕದಾಸರು ತಮ್ಮ ಮಾತು ಹಾಗೂ ಸಂಗೀತದ ಮೂಲಕ ಜನರನ್ನು ಜಾಗೃತಿಗೊಳಿಸುವುದರ ಜೊತೆಗೆ ಅಸಮಾನತೆ ಭಾವವನ್ನು ದೂರಗೊಳಿಸಿ ಸುಂದರ ಸಮಾಜ ನಿಮಾರ್ಣಗೊಳ್ಳುವಲ್ಲಿ ಮಹತ್ತರವಾದ ಪಾತ್ರ ವಹಿಸಿದ್ದಾರೆ. ಕನಕನ ಸಂದೇಶ ಸರ್ವವ್ಯಾಪಿ ಹಾಗೂ ಸರ್ವಸ್ಪರ್ಶಿಯಾಗಿ ನಿತ್ಯ ಸಮಾಜವನ್ನು ಕಟ್ಟಬಲ್ಲ ಒಂದು ಸಂದೇಶವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭೆ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಇಂದು ನಗರದ ಅಜ್ಜರಕಾಡುವಿನ ಭುಜಂಗ ಪಾರ್ಕ್‌ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘ ಹಾಗೂ ಹಾಲುಮತ ಮಹಾಸಭಾ ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನಕದಾಸ ಜಯಂತಿ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಉಡುಪಿ ಹಾಗೂ ಕನಕನಿಗೂ ಬಹು ದೊಡ್ಡ ಭಾವನಾತ್ಮಕ ಸಂಬಂಧವಿದ್ದು, ದೇವರು ಮತ್ತು ಭಕ್ತನ ನಡುವೆ ಅಸಮಾನತೆಗೆ ಯಾವುದೇ ಸ್ಥಾನವಿಲ್ಲ, ಭಕ್ತಿಯೇ ಪ್ರಧಾನವಾಗಿರುತ್ತದೆ ಎಂಬುದನ್ನು ಶ್ರೀಕೃಷ್ಣನು ಕನಕನ ಮೂಲಕ ಜಗತ್ತಿಗೆ ಸಾರಿದನು ಎಂಬುವುದು ಕನಕನ ಕಿಂಡಿಯ ಒಂದು ವಿಶೇಷತೆಯಾಗಿದೆ ಎಂದರು.

ಶಾಸಕ ಯಶ್‌ಪಾಲ್ ಎ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಪ್ರಜ್ಞಾ ಮಾರ್ಪಳ್ಳಿ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕನಕದಾಸ ಸಮಾಜ ಸಂಘದ ಜಿಲ್ಲಾ ಅಧ್ಯಕ್ಷ ಹನುಮಂತ ಡೊಳ್ಳಿನ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಸಹ ಕಾರ್ಯದರ್ಶಿ ಬಸವರಾಜ್ ವೈ. ಕುರುಬರ, ಹಾಲುಮತ ಮಹಾ ಸಭಾದ ಜಿಲ್ಲಾ ಅಧ್ಯಕ್ಷ ಸಿದ್ದಪ್ಪ ಹೆಚ್ ಐಹೊಳೆ, ಸಮಾಜದ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು