ಕಾಂತರ-1 ಚಿತ್ರದ ನೃತ್ಯ ಕಲಾವಿದರಿದ್ದ ವಾಹನ ಪಲ್ಟಿ- 6 ಮಂದಿಗೆ ಗಂಭೀರ ಗಾಯ

ಕುಂದಾಪುರ : ಕಾಂತರ-1 ಚಿತ್ರದ ನೃತ್ಯ ಕಲಾವಿದರಿದ್ದ ವಾಹನ ಪಲ್ಟಿಯಾದ ಪರಿಣಾಮ 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಕುಂದಾಪುರ ತಾಲೂಕಿನ ಹಾಲ್ಕಲ್ ರಸ್ತೆಯಲ್ಲಿ ಸಂಭವಿಸಿದೆ.

ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕೊಲ್ಲೂರು ಮಾರ್ಗದಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. 25 ಮಂದಿ ನೃತ್ಯ ಕಲಾವಿದರನ್ನು ಹೊತ್ತೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ 6 ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳ ಪೈಕಿ ಹಲವರಿಗೆ ಜಡ್ಕಲ್‌ನ ಮಹಾಲಕ್ಷ್ಮಿ ಕ್ಲೀನಿಕ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜೂನಿಯರ್ ನೃತ್ಯ ಕಲಾವಿದರು ಹಾಡಿನ ಚಿತ್ರೀಕರಣಕ್ಕಾಗಿ ಬಂದಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಇನ್ನೂ ನಾಲ್ಕು ದಿನಗಳ ಕಾಲ ಚಿತ್ರೀಕರಣ ಬಾಕಿಯಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ