ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನಿಂದ ಸನ್ಮಾನ

ಮಂಗಳೂರು : 2024‌ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನವಂಬರ್ 16 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನಿಂದ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.

ಉದ್ಯಮ ಕ್ಷೇತ್ರದ ಅದ್ವಿತೀಯ ಸಾಧಕರಾಗಿ ಸಾವಿರಾರು ಜನರ ಬದುಕಿಗೆ ಬೆಳಕಾದ ಅಭಿವೃದ್ದಿಯ ರೂವಾರಿ, ದೈವ, ದೇವಸ್ಥಾನಗಳ ಅಭಿವೃದ್ಧಿಯ ಪ್ರೇರಕ ಶಕ್ತಿಯಾಗಿ ಕರಾವಳಿಯ ನೂರಾರು ಸಂಘ ಸಂಸ್ಥೆಗಳಿಗೆ ನೆರವಿನ ಶಕ್ತಿ ನೀಡಿದ ಮಹಾದಾನಿಗಳಾದ ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಕರ್ನಾಟಕ ಸುವರ್ಣ ಮಹೋತ್ಸವ ಪ್ರಶಸ್ತಿ ಒಲಿದು‌ ಬಂದಿದ್ದು, ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನ ಸಮಾರಂಭ ಜರಗಲಿದೆ ಎಂದು ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಶ್ರೀ ಪಟ್ಲ ಸತೀಶ್ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸಮಾರಂಭದಲ್ಲಿ ಇತರ ಸಂಘ ಸಂಸ್ಥೆಗಳಿಗೂ ಗೌರವಾರ್ಪಣೆ ಮಾಡುವ ಅವಕಾಶ ಇದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ