ಕಾಪು ಹಿಟ್ ಆ್ಯಂಡ್ ರನ್ ಪ್ರಕರಣ; ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಸವಾರ; ಆರೋಪಿಯ ಬಂಧನ

ಕಾಪು : ಅತೀ‌ ವೇಗವಾಗಿ ಬಂದ ಥಾರ್ ಜೀಪ್ ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪು ತಾಲೂಕಿನ ಬೆಳಪು ಮಿಲಿಟ್ರಿ ಕಾಲೋನಿ ಎಂಬಲ್ಲಿ ನಡೆದಿದೆ.

ಮೃತರನ್ನು ಬೆಳಪು ನಿವಾಸಿ ಮಹಮ್ಮದ್ ಹುಸೇನ್ (39) ಎಂದು ಗುರುತಿಸಲಾಗಿದೆ. ಕಾಂಗ್ರೆಸ್ ಮುಖಂಡ, ಸಹಕಾರಿ ಧುರೀಣ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಪ್ರಜ್ವಲ್ ಶೆಟ್ಟಿ ಎಂಬಾತ ನ.11ರಂದು ಮುಂಜಾನೆ 5 ಗಂಟೆಗೆ ಹಿಟ್ ಆ್ಯಂಡ್ ರನ್ ನಡೆಸಿ ಪರಾರಿಯಾಗಿದ್ದನು. ಜೀಪ್ ಬೈಕ್‌ಗೆ ಡಿಕ್ಕಿ ಹೊಡೆದ ತೀವ್ರತೆಗೆ ಮಹಮ್ಮದ್ ಹುಸೇನ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣ ನಡೆದ ಬೆನ್ನಲ್ಲೇ ಪ್ರಜ್ವಲ್ ಶೆಟ್ಟಿ ತಲೆಮರೆಸಿಕೊಂಡಿದ್ದನು. ಇದೀಗ ಆರೋಪಿಯನ್ನ ಶಿರ್ವ ಪೊಲೀಸರು ಬಂಧಿಸಿದ್ದಾರೆ. ಶಿರ್ವ ಪೊಲೀಸರು ಹಿಟ್ ಆ್ಯಂಡ್ ರನ್ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು