ಕಾಪು ಪುರಸಭಾ ಸದಸ್ಯೆ ಸರಿತಾ ಬಿಜೆಪಿ ಸೇರ್ಪಡೆ

ಕಾಪು : ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಎಸ್.ಡಿ.ಪಿ.ಐ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ) ಬೆಂಬಲಿತ ಕಾಪು ಪುರಸಭಾ ಸದಸ್ಯೆ ಸರಿತಾ ಹಾಗೂ ಅವರ ಪತಿ ಶಿವಾನಂದ್ ಇಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ ಅವರು ಭಾರತೀಯ ಜನತಾ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಬಾಲಾಜಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕೋಶಾಧಿಕಾರಿಗಳಾದ ಮನೋಹರ್ ಕಲ್ಮಾಡಿ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು, ಜಿಲ್ಲಾ ಬಿಜೆಪಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಪುರಸಭೆಯ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು