ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರ ಆರೋಗ್ಯ ರಕ್ಷಾ ಸಮಿತಿ ಸಭೆ

ಕಾಪು : ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು ಇದರ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಹಿರಿಯ ನಾಗರಿಕರಿಗೆ “ಆಯುಷ್ಮಾನ್ ವಯೋವಂದನಾ” ಕಾರ್ಡನ್ನು ವಿತರಿಸಿ ಬಳಿಕ ಆಸ್ಪತ್ರೆಯ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಕಾಪು ಪುರಸಭೆಯ ಸದಸ್ಯರಾದ ಅರುಣ್ ಶೆಟ್ಟಿ ಪಾದೂರು, ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಳದೂರು, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಈಶ್ವರ್ ಗಡಾದ್, ತಾಲೂಕು ವೈದ್ಯಾಧಿಕಾರಿಗಳಾದ ವಾಸುದೇವ ಉಪಾಧ್ಯಾಯ, ಆಡಳಿತ ವೈದ್ಯಾಧಿಕಾರಿಗಳಾದ ರಾಜಶ್ರೀ, ವೈದ್ಯಾಧಿಕಾರಿಗಳಾದ ಧೃತಿ ವಿ ಆಳ್ವ ಉಪಸ್ಥಿತರಿದ್ದರು.

Related posts

ಬಾವಿಗೆ ಬಿದ್ದು ಕೃಷಿಕ ಮೃತ್ಯು

ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್ : ವಾರದೊಳಗೆ ಜಾಗ ಗುರುತಿಸಲು ಸಂಸದ ಕ್ಯಾ. ಚೌಟ ಸೂಚನೆ

ಕೆಎಂಸಿ ಮಣಿಪಾಲದಲ್ಲಿನ ವಂಧ್ಯತ್ವ ಸಂರಕ್ಷಣಾ ಕೇಂದ್ರವು ಯಶಸ್ಸಿನ ಒಂದು ದಶಕವನ್ನು ಆಚರಿಸುತ್ತದೆ.