ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಅಥ್ಲೆಟಿಕ್ ಮೀಟ್ 2024 -25 ನಲ್ಲಿ : ಕಾರ್ಕಳ ಜ್ಞಾನಸುಧಾದ ಪ್ರತ್ಯುಶ್‌ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಸರಕಾರಿ ಪ್ರಾಥಮಿಕ ಶಾಲೆ ಶಿರ್ಲಾಲು ಸೂಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ಬಾಲಕ ಮತ್ತು ಬಾಲಕಿಯರ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಅಥ್ಲೆಟಿಕ್ ಮೀಟ್ 2024 -25 ನಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಪ್ರತ್ಯುಶ್ ಶೆಟ್ಟಿ 200 ಮೀ. ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಗಳಿಸುವ ಮೂಲಕ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

ಅಲ್ಲದೆ ಇದೇ ಪಂದ್ಯಾಟದಲ್ಲಿ 100ಮೀ. ಓಟದಲ್ಲಿ ತೃತೀಯ ಸ್ಥಾನದೊಂದಿಗೆ ಕಂಚಿನ ಪದಕವನ್ನು ಪಡೆದಿರುತ್ತಾರೆ. ಇವರು ಕಾರ್ಕಳದ ಪ್ರಶಾಂತ್ ಶೆಟ್ಟಿ ಹಾಗೂ ಸಾರಿಕಾ ಶೆಟ್ಟಿ ದಂಪತಿ ಪುತ್ರ. ಸಾಧಕ ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ

ಸಚಿವ ಜಾರಕಿಹೊಳಿ ಅವರಿಂದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ