ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಪ್ರಕರಣ : ಶಿಲ್ಪಿ ಕೃಷ್ಣ ನಾಯ್ಕ್ ಬಂಧನವಾಗಿದೆ.. ಉಳಿದ ಆರೋಪಿಗಳನ್ನು ಬಂಧಿಸಲು ಆಗ್ರಹ

ಉಡುಪಿ : ಬೈಲೂರು ಉಮಿಕಲ್‌ ಬೆಟ್ಟದ ಮೇಲೆ ನಿರ್ಮಿಸಿರುವ ಪರಶುರಾಮ ಥೀಮ್ ಪಾರ್ಕ್‌ನಲ್ಲಿನ ಪರಶುರಾಮ ಮೂರ್ತಿ ನಿರ್ಮಾಣದ ಹಿಂದಿನ ಅಕ್ರಮ ವಿಳಂಬವಾಗಿ ಬೆಳಕಿಗೆ ಬಂದಿದೆ.

ವಂಚನೆ ಮಾಡಿದ ಶಿಲ್ಪಿ ಕೃಷ್ಣ ನಾಯ್ಕ ಈಗಾಗಲೇ ಬಂಧನಕ್ಕೊಳಗಾಗಿದ್ದು, ಉಳಿದ ಆರೋಪಿಗಳನ್ನು ಪೊಲೀಸರು ತತ್‌ಕ್ಷಣವೇ ಬಂಧಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಮುನಿಯಾಲು ಉದಯ ಕುಮಾರ್‌ ಶೆಟ್ಟಿ ಆಗ್ರಹಿಸಿದರು.

ಪರಶುರಾಮನ ಮೂರ್ತಿಯ ಸೊಂಟದ ಮೇಲ್ಭಾಗ ಎಲ್ಲಿಗೆ ಹೋಗಿದೆ ಎಂಬ ಬಗ್ಗೆಯೂ ಪೊಲೀಸರು ಸೂಕ್ತ ತನಿಖೆ ನಡೆಸಬೇಕು. ಈ ಅಕ್ರಮದಲ್ಲಿ ಹಲವರ ಕೈವಾಡವಿದ್ದು ಪೊಲೀಸರು ಎಲ್ಲರನ್ನು ವಿಚಾರಣೆಗೆ ಒಳಗಪಡಿಸಬೇಕು. ಪ್ರಕರಣವನ್ನು ಅತಿ ಶೀಘ್ರದಲ್ಲಿ ಇತ್ಯರ್ಥ‌ಪಡಿಸಿ. ಉಮಿಕಲ್‌ ಬೆಟ್ಟದ ಮೇಲೆ ಹೊಸ ಮೂರ್ತಿಯನ್ನು ನಿರ್ಮಿಸಿ ಪ್ರವಾಸಿಗರಿಗೆ ಮುಕ್ತಗೊಳಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಪರಶುರಾಮನ ಮೂರ್ತಿ ವಿಚಾರದಲ್ಲಿ ಶಿಲ್ಪಿ ಕೃಷ್ಣ ನಾಯ್ಕಗೆ ತೊಂದರೆ ನೀಡುವುದು ನಮ್ಮ ಉದ್ದೇಶವಲ್ಲ. ತಪ್ಪಿಗೆ ನೇರ ಹೊಣೆಯಾಗಿರುವವರು ವಿಧಾನಸಭೆ ಸದಸ್ಯರಾಗಿದ್ದು, ಕಲಾವಿದ ಮಾತ್ರ ಜೈಲುಪಾಲಾಗಿದ್ದಾನೆ. ಮೂರ್ತಿ ನಿರ್ಮಾಣಕ್ಕೆಂದು ಮಂಜೂರಾದ 1.25 ಕೋಟಿ ರೂ.ಗಳನ್ನು ಟೆಂಡರ್‌ಗೂ ಮೊದಲೇ ಕೃಷ್ಣ ನಾಯ್ಕಗೆ ನೀಡಿದ್ದಾರೆ. ಕೇವಲ 45 ದಿನಗಳಲ್ಲಿ 33 ಅಡಿ ಕಂಚಿನ ಮೂರ್ತಿ ನಿರ್ಮಾಣ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ