ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ : ಮತ್ತಿಬ್ಬರು ಆರೋಪಿಗಳ ಬಂಧನ

ಉಡುಪಿ : ಕಾರ್ಕಳದಲ್ಲಿ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಗೋವಿಂದಪಲ್ಲಿ ನಿವಾಸಿ ಗಿರಿರಾಜು ಜಗಾಧಾಬಿ (31), ಉಡುಪಿ ಜಿಲ್ಲೆ ಕಾಪು ತಾಲ್ಲೂಕಿನ ಶಂಕರಪುರದ ಜಾನ್‌ ನೊರೋನ್ಹಾ (30) ಬಂಧಿತ ಆರೋಪಿಗಳು.

ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಪೊಲೀಸ್‌ ವಶಕ್ಕೆ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಲ್ತಾಫ್, ಕ್ಸೇವಿಯರ್ ರಿಚರ್ಡ್ ಕ್ವಾಡ್ರಸ್ ಮತ್ತು ಅಭಯ್‌ ಎಂಬುವವರನ್ನು ಪೊಲೀಸರು ಈ ಹಿಂದೆ ಬಂಧಿಸಿದ್ದರು. ಒಟ್ಟು ಬಂಧಿತರ ಸಂಖ್ಯೆ ಐದಕ್ಕೆ ಏರಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ