6 ಕೋಟಿ ಅನುದಾನದಲ್ಲಿ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿ ಅಭಿವೃದ್ಧಿ – ಸಂಸದರಿಂದ ಗುದ್ದಲಿ ಪೂಜೆ

ಉಡುಪಿ : ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿ (CRIF) ಯಿಂದ 6 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಇದರ ಗುದ್ದಲಿ ಪೂಜೆಯನ್ನು ಇಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಭಾ ಶೆಟ್ಟಿ, ಉಪಾಧ್ಯಕ್ಷೆ ಸುಗುಣಾ ಪೂಜಾರ್ತಿ, ಕುರ್ಕಾಲು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Related posts

40 ಮರಾಠ ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ

ವ್ಯಾಸರಾಜ ಶ್ರೀಗಳಿಂದ ಸಂಸ್ಥಾನ ಪೂಜೆ

ಮೀನು ವ್ಯಾಪಾರಿಗೆ 90 ಲಕ್ಷ ರೂ.ವಂಚನೆ – ದೂರು ದಾಖಲು