ಕಟಪಾಡಿ : ಎಸ್.ವಿ.ಎಸ್ ಪದವಿ ಪೂರ್ವ ಕಾಲೇಜು ಕಟಪಾಡಿ ಇದರ “ಅಮೃತ ಮಹೋತ್ಸವ” ಬಹಳ ಅದ್ದೂರಿಯಾಗಿ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿ ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ಕಟಪಾಡಿ ಶಾಖೆ ವತಿಯಿಂದ ಕಾಲೇಜಿಗೆ ಕೊಡಮಾಡಿದ ಜನರೇಟರ್ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಕೆ. ಸತ್ಯೇಂದ್ರ ಪೈ, ಕಟಪಾಡಿ ಕೆನರಾ ಬ್ಯಾಂಕ್ ಪ್ರಬಂಧಕರಾದ ಸುಶ್ಮಿತಾ ಪಿ, ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಕೆ. ವಸಂತ್ ಮಾಧವ್ ಭಟ್, ರವೀಂದ್ರನಾಥ ಶೆಟ್ಟಿ, ಎ. ಲಕ್ಮೀ ಬಾಯಿ ಹಾಗೂ ಉಪಾಧ್ಯಕ್ಷರು ಸರ್ವ ಸದಸ್ಯರು ಉಪಸ್ಥಿತರಿದ್ದರು.

