ಕೇರಳ ರಾಜ್ಯಪಾಲ ಆರೀಫ್‌ ಮೊಹಮ್ಮದ್‌ ಖಾನ್‌ ಕೊಲ್ಲೂರಿಗೆ : ಇಂದು ಕೃಷ್ಣ ಮಠಕ್ಕೆ ಭೇಟಿ

ಕೊಲ್ಲೂರು : ಕೇರಳದ ರಾಜ್ಯಪಾಲ ಆರೀಫ್‌ ಮೊಹಮ್ಮದ್‌ ಖಾನ್‌ ಅವರು ಶನಿವಾರ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇಗುಲದ ಅರ್ಚಕರಾದ ಡಾ| ಕೆ.ಎನ್‌. ನರಸಿಂಹ ಅಡಿಗ, ಸುಬ್ರಹ್ಮಣ್ಯ ಅಡಿಗ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆದವು. ಕುಂದಾಪುರ ಉಪಕಮಿಷನರ್‌ ಮಹೇಶ್ಚಂದ್ರ, ದೇಗುಲದ ಕಾರ್ಯನಿರ್ವಹಣಾ ಧಿಕಾರಿ ಪ್ರಶಾಂತಕುಮಾರ್‌ ಶೆಟ್ಟಿ, ಬೈಂದೂರು ತಹಶೀಲ್ದಾರ್‌ ಪ್ರದೀಪ್‌, ಡಿವೈಎಸ್‌ಪಿ ಬೆಳ್ಳಿಯಪ್ಪ, ಅರ್ಚಕರು, ಸಿಬಂದಿ ಉಪಸ್ಥಿತರಿದ್ದು, ರಾಜ್ಯಪಾಲರನ್ನು ಸ್ವಾಗತಿಸಿದರು.

ದೇಗುಲದ ವತಿಯಿಂದ ರಾಜ್ಯಪಾಲರನ್ನು ಸಮ್ಮಾನಿಸಲಾಯಿತು. ಬಳಿಕ ಉಡುಪಿಗೆ ತೆರಳಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ