ನಿಟ್ಟೆ ಅಂದರ್ ಬಾಹರ್ ಅಡ್ಡೆಗೆ ಖಾಕಿ ರೇಡ್ : 6 ಮಂದಿ ಅಂದರ್

ಕಾರ್ಕಳ : ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಹುಣಸೆಕಟ್ಟೆ ಎಂಬಲ್ಲಿ ಅಂದರ್ ಬಾಹರ್ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಭಾನುವಾರ ಆಗಸ್ಟ್ 18‌ರಂದು ನಿಟ್ಟೆ ಗ್ರಾಮದ ಹುಣಸೆಕಟ್ಟೆ ಎಂಬಲ್ಲಿರುವ ಹಳೆಯ ಕ್ರಶರ್ ಬಳಿ ಸದಾನಂದ, ಗಣೇಶ್, ಪ್ರಥಮ್, ಜಯರಾಜ್, ಸೂರ್ಯ ಮತ್ತು ರಾಜ ಎಂಬವರು ಅಂದರ್-ಬಾಹರ್ ಎಂಬ ಜುಗಾರಿ ಆಟವನ್ನು ಆಡುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆಟವಾಡುತ್ತಿದ್ದ 6 ಮಂದಿಯನ್ನು ವಶಪಡಿಸಿಕೊಂಡಿದ್ದಾರೆ.

ಘಟನಾ ಸ್ಥಳದಲ್ಲಿ ಆಟಕ್ಕೆ ಬಳಸಿದ್ದ 10,200 ರೂ. ನಗದು, ಇಸ್ಪೀಟ್ ಎಲೆಗಳು, ದ್ವಿಚಕ್ರ ವಾಹನ ಸೇರಿದಂತೆ ಇತರ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ