ಕೋಳಿ ಅಂಕ ಅಡ್ಡೆಗೆ ಖಾಕಿ ರೇಡ್ : 9 ಕೋಳಿಗಳ ವಶ : ಜೂಜುಕೋರರು ಎಸ್ಕೇಪ್

ಉಡುಪಿ : ಅಂಬಲಪಾಡಿಯಲ್ಲಿ ಅನುಮತಿ ಇಲ್ಲದೆ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಉಡುಪಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ 9 ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರನ್ನು ಕಂಡ ಸ್ಥಳೀಯರು ಹಾಗೂ ಜೂಜುಕೋರರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಮಾರಿ‌ ಹಬ್ಬದ ಹಿನ್ನೆಲೆಯಲ್ಲಿ ಕೋಳಿ ಅಂಕ ನಡೆಯುತ್ತಿತ್ತು. ಆದರೆ ಈ ಬಾರಿ ಕೋಳಿ ಅಂಕವನ್ನು ಅನುಮತಿ ಇಲ್ಲದೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಪೊಲೀಸರು ಕೋಳಿ ಅಂಕಕ್ಕೆ ದಾಳಿ ನಡೆಸಿ ಕೋಳಿಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ