ವ್ಯಕ್ತಿಯನ್ನು ಅಪಹರಣ ಮಾಡಿ, ಚಾಕು ತೋರಿಸಿ ಹಣ ಲೂಟಿ

ಮಣಿಪಾಲ : ವ್ಯಕ್ತಿಯೊಬ್ಬರನ್ನು ಅಪಹರಿಸಿ, ಚಾಕು ತೋರಿಸಿ ಬೆದರಿಸಿ ಅವರಲ್ಲಿದ್ದ 1 ಲಕ್ಷ ರೂ. ಹಣವನ್ನು ಕಸಿದು ಪರಾರಿಯಾದ ಘಟನೆ ಉಡುಪಿ ನಗರದಲ್ಲಿ ಸಂಭವಿಸಿದೆ.

ಆತ್ರಾಡಿಯ ಮಹಮ್ಮದ್‌ ನಿಹಾಲ್‌ ಅವರು ಬಸ್‌ನ ಕಲೆಕ್ಷನ್‌ ವ್ಯವಹಾರ ಮಾಡಿಕೊಂಡಿದ್ದು, ಬಸ್‌ನ ಕಲೆಕ್ಷನ್‌ ಹಣವನ್ನು ತೆಗೆದುಕೊಂಡು ಉಡುಪಿ ಸರ್ವಿಸ್‌ ಬಸ್‌ ನಿಲ್ದಾಣದ ಬೇಕರಿ ಬಳಿ ಹೋಗುತ್ತಿದ್ದಾಗ ಕಾರಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಬಲವಂತವಾಗಿ ಅವರನ್ನು ಕಾರಿನಲ್ಲಿ ಕರೆದೊಯ್ದಿದ್ದಾರೆ.

ಕಾರಿನಲ್ಲಿ ಚಾಕು ತೋರಿಸಿ, ಕೈಯಿಂದ ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಣವನ್ನು ಕಸಿದು ಜೀವ ಬೆದರಿಕೆ ಹಾಕಿದ್ದಾರೆ. ಆರೋಪಿಗಳನ್ನು ಶಾರೀಕ್‌, ಇರ್ಫಾನ್‌ ಎಂದು ಗುರುತಿಸಲಾಗಿದೆ. ಇವರ ಜತೆಗೆ ಇನ್ನೂ ಇಬ್ಬರು ಅಪರಿಚಿತರು ಇದ್ದರು ಎಂದು ಮಹಮ್ಮದ್‌ ನಿಹಾಲ್‌ ಉಡುಪಿ ನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ