ಕಿಡ್ನಾಪ್ ಮಾಡಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ಆರೋಪಿ ಸೆರೆ

ಕಾರ್ಕಳ : ನಗರ ಠಾಣೆ ವ್ಯಾಪ್ತಿಯಲ್ಲಿ ಯುವತಿಯೋರ್ವಳನ್ನು ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿ.

ಕುಕ್ಕುಂದೂರು ಗ್ರಾಮದ 21ರ ವಯಸ್ಸಿನ ಯುವತಿಗೆ ಅನ್ಯಕೋಮಿನ ಮೂವರು ಯುವಕರು ಅಮಲು ಪದಾರ್ಥ ನೀಡಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಯುವತಿಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಸಂತ್ರಸ್ತೆ ಯುವತಿ ಕುಕ್ಕುಂದೂರಿನ ಅಯ್ಯಪ್ಪ ನಗರದ ನಿವಾಸಿ. ಮನೆಯ ಪಕ್ಕದ ರಂಗನಪಲ್ಕೆ ಎಂಬ ಸ್ಥಳಕ್ಕೆ ಕರೆದೊಯ್ದು ಹಾಡಿಯಲ್ಲಿ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.

ಆರಂಭದಲ್ಲಿ ಯುವತಿಗೆ ಮದ್ಯ ಹಾಗೂ ಇತರ ಮಾದಕ ಪದಾರ್ಥ ನೀಡಿ ಓರ್ವ ಅತ್ಯಾಚಾರ ಎಸಗಿದ್ದು, ಬಳಿಕ ಮತ್ತಿಬ್ಬರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ತಿಳಿದು ಬಂದಿದೆ. ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !