ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರ ಕೊಲೆ – ಉಡುಪಿ ಜಿಲ್ಲೆಯ ಆಸ್ಪತ್ರೆಗಳ ಓಪಿಡಿ ಬಂದ್

ಉಡುಪಿ : ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯ ಘಟನೆಗೆ ಖಂಡನೆ ವ್ಯಕ್ತಪಡಿಸಲು ಉಡುಪಿ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳ ಓಪಿಡಿ (ಹೊರರೋಗಿ ಚಿಕಿತ್ಸಾ ವಿಭಾಗ)ಬಂದ್‌ಗೆ ಕರೆ ನೀಡಲಾಗಿದೆ.

ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಸಿ ಉಡುಪಿ ಜಿಲ್ಲಾ ಐಎಂಎ (ಇಂಡಿಯನ್ ಮೆಡಿಕಲ್ ಅಸೋಸಿಯೇಶನ್) ಸಂಘಟನೆ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳ ಓಪಿಡಿ ಸೇವೆಗಳನ್ನು ಬಂದ್ ಮಾಡುವ ನಿರ್ಧಾರ ತೆಗೆದುಕೊಂಡಿವೆ.

ಮಣಿಪಾಲ ಕೆಎಂಸಿ ಆಸ್ಪತ್ರೆ ಹಾಗೂ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳ ಓಪಿಡಿ ಸೇವೆಗಳು ಬಂದ್‌ ಆಗಿರುವುದರಿಂದ, ರೋಗಿಗಳಿಗೆ ತೀವ್ರ ತೊಂದರೆ ಉಂಟಾಗಿದೆ. ಈ ಬೆಳವಣಿಗೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಮತ್ತು ಹಾಸನ ಜಿಲ್ಲೆಯ ರೋಗಿಗಳಿಗೆ ಕೂಡಾ ಸಮಸ್ಯೆ ಉಂಟುಮಾಡಿದೆ.

ಮಣಿಪಾಲ ಕೆಎಂಸಿ ಆಸ್ಪತ್ರೆಯನ್ನು ನೆಚ್ಚಿಕೊಂಡು ಬರುವ ಸುತ್ತಮುತ್ತಲ ಜಿಲ್ಲೆಯ ಜನರು, ಕೇರಳ, ಗೋವಾ ರಾಜ್ಯಗಳಿಂದ ಮಣಿಪಾಲದಲ್ಲಿ ಚಿಕಿತ್ಸೆ ಪಡೆಯಲು ಬರುವ ಜನರಿಗೂ ಇದು ಪರಿಣಾಮ ಬೀರಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ