ಕೊಲ್ಕತ್ತ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ – ವಿಮಾ ನೌಕರರಿಂದ ಪ್ರತಿಭಟನೆ

ಉಡುಪಿ : ಕೊಲ್ಕತ್ತ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವಿರೋಧಿಸಿ ವಿಮಾ ನೌಕರರು ಮತ್ತು ಅಧಿಕಾರಿಗಳು ಉಡುಪಿ ವಿಭಾಗೀಯ ಕಛೇರಿಯ ಮುಂದೆ ಇಂದು ಮತ ಪ್ರದರ್ಶನ ನಡೆಸಿದರು.

ದೇಶದಾದ್ಯಂತ ಕೊಲ್ಕತ್ತದ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ಮಹಾರಾಷ್ಟ್ರದ ಬದಲಾಪುರದಲ್ಲಿ ಕಂದಮ್ಮಗಳ ಮೇಲೆ ನಡೆದಿ‌ರುವ ದೌರ್ಜನ್ಯ ಮತ್ತು ಬೆಂಗಳೂರಿನಲ್ಲಿ ನಡೆದಿರುವ ಪ್ರಕರಣಗಳ ಬಗ್ಗೆ ಕೂಡ ತನಿಖೆ ನಡೆದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ವಿಮಾ ನೌಕರರ ಸಂಘದ ಉಡುಪಿ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಭಾಕ‌ರ್ ಕುಂದ‌ರ್ ಉಪಸ್ಥಿತರಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ