ಪೆರ್ನಾಲುವಿನಲ್ಲಿ ಕೊರಗರ ಭೂಮಿ ಹಬ್ಬಕ್ಕೆ ಚಾಲನೆ

ಶಿರ್ವ : ಕರ್ನಾಟಕ-ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ 16ನೇ ವರ್ಷದ ಭೂಮಿ ಹಬ್ಬವು ಕರ್ನಾಟಕ-ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷ ಸುಶೀಲ ನಾಡ ಅವರ ಅಧ್ಯಕ್ಷತೆಯಲ್ಲಿ ಪೆರ್ನಾಲು ಆದಿವಾಸಿ ಜೀವನ ಶಿಕ್ಷಣ ಕೇಂದ್ರದಲ್ಲಿ ನಡೆಯಿತು.

ಹಬ್ಬದ ಪೂರ್ವಭಾವಿಯಾಗಿ ಶಿರ್ವ ಕೆನರಾ ಬ್ಯಾಂಕ್ ವೃತ್ತದಿಂದ ಪೇಟೆಯ ಮೂಲಕ ಪೆರ್ನಾಲ್‌ನವರೆಗೆ ನಡೆದ ಕಾಲ್ನಡಿಗೆ ಜಾಥಾಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಡೋಲು ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಪೆರ್ನಾಲು ಆದಿವಾಸಿ ಜೀವನ ಶಿಕ್ಷಣ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುದರಂಗಡಿ ಗ್ರಾ.ಪಂ. ಅಧ್ಯಕ್ಷೆ ನಮಿತಾ ಭೂಮಿ ಹಬ್ಬವನ್ನು ಉದ್ಘಾಟಿಸಿದರು. ಕೊರಗ ಅಭಿವೃದ್ಧಿಸಂಘಗಳ ಒಕ್ಕೂಟದ ನ್ಯಾಯಾಧೀಶ ಬಾಲರಾಜ್ ಕೋಡಿಕಲ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಭೂಮಿ ಹಬ್ಬದ ಸವಿನೆನಪಿಗಾಗಿ ತೆಂಗಿನ ಸಸಿಯನ್ನು ನೆಡಲಾಯಿತು. ಬೇಬಿ ಮಧುವನ ಮತ್ತು ಪ್ರತೀಕ್ಷಾ ಶಂಕರನಾರಾಯಣ ಹಬ್ಬದ ದೀಪ ಬೆಳಗಿಸಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ