ಉಚ್ಚಿಲದಲ್ಲಿ ಕೆಎಸ್ಆರ್‌ಟಿ‌ಸಿ ಬಸ್ ಡಿಕ್ಕಿ; ಪಾದಾಚಾರಿ ಸಾವು

ಉಚ್ಚಿಲ : ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಉಚ್ಚಿಲ ಪೇಟೆಯಲ್ಲಿ ಸಂಭವಿಸಿದೆ.
ಮೃತಪಟ್ಟವರನ್ನು ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಶಿವಪ್ಪ ಪೂಜಾರಿ ಎಂದು ಗುರುತಿಸಲಾಗಿದೆ.

ಮಂಗಳೂರಿನಿಂದ ಉಡುಪಿ ಕಡೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಉಚ್ಚಿಲದ ಪೇಟೆಯಲ್ಲಿ ರಸ್ತೆ ದಾಟುತ್ತಿದ್ದ ಶಿವಪ್ಪ ಪೂಜಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, SDPI ಅಂಬ್ಯುಲೆನ್ಸ್’ನಲ್ಲಿ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲಾಯಿತು. ಈ ವೇಳೆ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಶಿವಪ್ಪ ಪೂಜಾರಿ ಅವರನ್ನು ಸಾಮಾಜಿಕ ಕಾರ್ಯಕರ್ತ ಜಲಾಲುದ್ದೀನ್, ಸಾದಿಕ್, ಅಂಬ್ಯುಲೆನ್ಸ್ ಚಾಲಕ ಹಮೀದ್, ಅಸೀಫ್, ರಿಕ್ಷಾ ಚಾಲಕರಾದ ಅಶ್ರಫ್, ಹನೀಫ್, ಅಬ್ದುಲ್ಲಾ ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿದರು.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ