ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ – ಬೈಕ್ ಸವಾರ ಮೃತ್ಯು

ಬಂಟ್ವಾಳ : ಬಿ.ಸಿ.ರೋಡ್ – ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ವಗ್ಗ ಉಗ್ಗಬೆಟ್ಟು ಎಂಬಲ್ಲಿ ಕೆಎಸ್ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.

ಪಡಂಗಡಿ ಗ್ರಾಮದ ಕನ್ನಡಿ ಕಟ್ಟೆ ಡೆಕ್ಕಲೊಟ್ಟು ನಿವಾಸಿ ರಾಜೇಂದ್ರ ಪೂಜಾರಿ (45) ಮೃತಪಟ್ಟ ಬೈಕ್ ಸವಾರ.

ಬಸ್ ಧರ್ಮಸ್ಥಳದಿಂದ ಮಂಗಳೂರು ಕಡೆಗೆ ತೆರಳುತ್ತಿತ್ತು. ಬೈಕ್ ಸವಾರ ಮಂಗಳೂರಿನಿಂದ ವೇಣೂರು ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತದ ನಡೆದಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮೃತರು ಪತ್ನಿ ಹಾಗೂ ಮೂರು ಪುತ್ರರನ್ನು ಅಗಲಿದ್ದಾರೆ.

ಈ ಬಗ್ಗೆ ಪಾಣೆಮಂಗಳೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Related posts

ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

4ಲಕ್ಷ ಹಣ ಲಂಚ ಸ್ವೀಕರಿಸುತ್ತಿದ್ದಾಗಲೇ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ

ದ್ವಿತೀಯ ಹಂತದ ಚಿತ್ರೀಕರಣ ಪೂರೈಸಿದ “ಪಿಲಿಪಂಜ”