ಹೊಂಡಕ್ಕೆ ಬಿದ್ದ ಕೆಎಸ್ಆರ್‌ಟಿಸಿ ಬಸ್ – 13ಮಂದಿಗೆ ಗಾಯ

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್‌ಟಿಸಿ ಬಸ್ಸೊಂದು ಪಲ್ಟಿಯಾಗಿ ರಸ್ತೆಬದಿಯ ಹೊಂಡಕ್ಕೆ ಬಿದ್ದ ಘಟನೆ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಕೊಪ್ಪಳ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ 13 ಮಂದಿಗೆ ಗಾಯವಾಗಿದ್ದು, ಐವರಿಗೆ ಗಂಭೀರ ಸ್ವರೂಪದ ಗಾಯವಾಗಿದೆ.

ವಿಶ್ವನಾಥ (70), ಶಾಕೀರ್ (32), ಶಿಲ್ಪಾ (16), ಸ್ವಾತಿ (16), ತನುಶ್ರೀ (17) ಎಂಬವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ಪವನ್(30), ನಿಖಿತಾ (29), ಸುಧಾಮ (23), ಹೇಮಾವತಿ (43), ರಾಜಶ್ರೀ (27), ಶೋಭಾ ಶೆಟ್ಟಿ ( 48), ಕಸ್ತೂರಿ (68), ಹೇಮಲತಾ (40) ಎಂಬವರಿಗೆ ಸಣ್ಣಪುಟ್ಟ ಗಾಯವಾಗಿದೆ.

ಧರ್ಮಸ್ಥಳದಿಂದ ಮಂಗಳೂರಿನಡೆಗೆ ಸಂಚರಿಸುವ ಕೆಎಸ್ಆರ್‌ಟಿಸಿ ಬಸ್ ವಗ್ಗ ಸಮೀಪದ ಕೊಪ್ಪಳ ಎಂಬಲ್ಲಿಗೆ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ. ತಕ್ಷಣ ಸ್ಥಳೀಯ ಯುವಕರು ಧಾವಿಸಿ ಬಸ್ಸಿನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರ ತೆಗೆಯಲು ಸಹಾಯ ಮಾಡಿದ್ದಾರೆ‌. ಘಟನೆಯಲ್ಲಿ ಒಟ್ಟು 13ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ