ಬಂಟ್ವಾಳ : ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ KSRTC ಬಸ್ ಸಂಚಾರಕ್ಕೆ ಚಾಲನೆ ನೀಡಲಾಗಿದೆ.
ಪೊಳಲಿ ಕ್ಷೇತ್ರದ ವಠಾರದಲ್ಲಿ KSRTC ಬಸ್ಗೆ ಪೂಜೆ ನೆರವೇರಿಸಿದ ಮೂಲಕ ಬಸ್ ಸಂಚಾರ ಚಾಲನೆಗೊಂಡಿದೆ. ಶ್ರೀ ಪೊಳಲಿ ಕ್ಷೇತ್ರದಿಂದ ಬೆಂಜನಪದವು, ಕಲ್ಪನೆ, ಕಡೇಗೋಳಿ, ಫರಂಗಿಪೇಟೆ, ಪಡೀಲಿನ ಮೂಲಕ ಮಂಗಳೂರಿಗೆ ಈ ಸರಕಾರಿ ಬಸ್ನ ವ್ಯವಸ್ಥೆಯು ಇರಲಿದೆ.
ಇದರಿಂದಾಗಿ ಈ ಭಾಗದ ಜನರ ಬಹುಕಾಲದ ಕನಸು ನನಸಾಗಿದೆ. ಹಲವು ವರ್ಷದಿಂದ ಈ ಮಾರ್ಗದಲ್ಲಿ ಮಂಗಳೂರಿನಿಂದ ಪೊಳಲಿಗೆ ಸರಕಾರಿ ಬಸ್ನ ವ್ಯವಸ್ಥೆ ಕಲ್ಪಿಸುವಂತೆ ಇಲ್ಲಿನ ನಾಗರಿಕರು KSRTC ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತ್ತು.
ಬ್ರಹ್ಮರಕೊಟ್ಲು ಯಕ್ಷಮಿತ್ರ ಸದಸ್ಯರು ಹಾಗೂ ಸ್ಥಳೀಯ ಮುಖಂಡರ ಮುತುವರ್ಜಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿಯೇ KSRTC ಬಸ್ ಆರಂಭಗೊಂಡಿದೆ. ನವರಾತ್ರಿಯ ಬಳಿಕವು ಈ ಬಸ್ನ ವ್ಯವಸ್ಥೆ ಮುಂದುವರಿಯಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.