ಕುಕ್ಕುಂದೂರು ಎಸಿ ಭೇಟಿ : ಹೊಸ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಗ್ರಾಮ ಪಂಚಾಯತ್‌ ನಿರ್ಧಾರ

ಕಾರ್ಕಳ : ಕುಕ್ಕುಂದೂರಿನ ಅಯ್ಯಪ್ಪನಗರದಲ್ಲಿರುವ ಅಂಗನವಾಡಿ ಕಟ್ಟಡಕ್ಕೆ ಜು. 3ರಂದು ಮರ ಬಿದ್ದು ಹಾನಿಯಾಗಿದ್ದು, ಇದೀಗ ಹೊಸ ಕಟ್ಟಡ ನಿರ್ಮಾಣಕ್ಕೆ ಕುಕ್ಕುಂದೂರು ಗ್ರಾಮ ಪಂಚಾಯತ್‌ ನಿರ್ಧರಿಸಿದೆ.

ಜು. 31ರಂದು ಕುಂದಾಪುರ ಉಪವಿಭಾಗ ಸಹಾಯಕ ಆಯುಕ್ತ ಮಹೇಶ್ಚಂದ್ರ ಕೆ. ಅಯ್ಯಪ್ಪನಗರ ಅಂಗನವಾಡಿಗೆ ಭೇಟಿ ನೀಡಿ ಪರಿಶೀಲಿಸಿದರು. ಕಟ್ಟಡ ದುರಸ್ತಿಗೆ 2 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸುವಂತೆ ಡಿಸಿಗೆ ಮನವಿ ಮಾಡುವುದಾಗಿ ಈ ವೇಳೆ ಎಸಿಯವರು ತಿಳಿಸಿದರು.

ಅಂಗನವಾಡಿ ಕೇಂದ್ರಕ್ಕೆ ಮರ ಬಿದ್ದ ಪರಿಣಾಮ ಕಟ್ಟಡದ ಹೆಂಚುಗಳು ಬಹುತೇಕ ಪುಡಿಪುಡಿಯಾಗಿತ್ತು. ಆದರೆ ಕುಕ್ಕುಂದೂರು ಗ್ರಾಮ ಪಂಚಾಯತ್‌ ಅಂಗನವಾಡಿ ದುರಸ್ತಿ ಬದಲು ಹೊಸ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದೆ. ತಹಶೀಲ್ದಾರ್‌ ನರಸಪ್ಪ, ಕಂದಾಯ ನಿರೀಕ್ಷಕ ಶಿವಪ್ರಸಾದ್, ಗ್ರಾಮ ಆಡಳಿತ ಅಧಿಕಾರಿಯವರು ಉಪಸ್ಥಿತರಿದ್ದರು.

ಹೊಸ ಕಟ್ಟಡ ನಿರ್ಮಾಣ ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ದೊರೆಯುವ ಹಣದಿಂದ ಸುಸಜ್ಜಿತವಾಗಿ ದುರಸ್ತಿ ಮಾಡುವುದು ಕಷ್ಟಸಾಧ್ಯ. ಆದ್ದರಿಂದ ಕುಕ್ಕುಂದೂರು ಗ್ರಾಮ ಪಂಚಾಯತ್‌ ವತಿಯಿಂದ ನರೇಗಾ ಯೋಜನೆಯಡಿಯಲ್ಲಿ ತಾಲೂಕು ಹಾಗೂ ಜಿಲ್ಲಾ ಪಂಚಾಯತ್‌ ಅನುದಾನ ಮೂಲಕ ಹೊಸ ಕಟ್ಟಡ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಕುಕ್ಕುಂದೂರು ಗ್ರಾಮ ಪಂಚಾಯತ್ ಅಧಿಕಾರಿ ಪ್ರದೀಪ್‌ ಕುಮಾರ್‌ ಶೆಟ್ಟಿ ತಿಳಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ