2024ರ ದಸರಾ ಸಿಎಂ ಕಪ್ ಬಾಕ್ಸಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದ ಕುಮಾರಿ ಅನುಶ್ರೀ ನಾಯ್ಕ್

ಮಣಿಪಾಲ : ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಪ್ರತಿಷ್ಠಿತ ರಾಜ್ಯಮಟ್ಟದ ದಸರಾ ಸಿಎಂ ಕಪ್ 2024ರಲ್ಲಿ 52-54 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನರ್ಸ್ ಪ್ರಾಕ್ಟೀಷನರ್ ಕುಮಾರಿ ಅನುಶ್ರೀ ನಾಯ್ಕ್ ಅವರು ತಮ್ಮ ಅದ್ಭುತ ಬಾಕ್ಸಿಂಗ್ ಕೌಶಲ್ಯವನ್ನು ಪ್ರದರ್ಶಿಸಿದ್ದಾರೆ.

ಬಾಕ್ಸಿಂಗ್‌ನಲ್ಲಿ ಸತತವಾಗಿ ತನ್ನ ಪ್ರತಿಭೆಯನ್ನು ಪ್ರದರ್ಶಿಸುತ್ತಿರುವ ಅನುಶ್ರೀ, ಈ ಹಿಂದೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಹಲವಾರು ಪದಕಗಳನ್ನು ಗೆದ್ದಿದ್ದಾರೆ. ಅವರ ಇತ್ತೀಚಿನ ಸಾಧನೆಯನ್ನು ಗುರುತಿಸಿ, ಕಸ್ತೂರ್ಬಾ ಆಸ್ಪತ್ರೆಯು ಅನುಶ್ರೀ ಅವರನ್ನು ಅಭಿನಂದಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಅವರು ಅನುಶ್ರೀ ಅವರಿಗೆ ಬಾಕ್ಸಿಂಗ್ ಕ್ಷೇತ್ರದಲ್ಲಿ ಉಜ್ವಲ ಭವಿಷ್ಯವಿದೆ, ಅವರ ಸಾಧನೆಯ ಬಗ್ಗೆ ನಮಗೆ ಹೆಮ್ಮೆ ಇದೆ, ಅವರು ಇನ್ನೂ ಹೆಚ್ಚಿನ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರ ಎರಡಕ್ಕೂ ಕೀರ್ತಿ ತರಲಿ ಎಂದು ಹಾರೈಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !