ಕುಂಭದ್ರೋಣ ಮಳೆ – ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಾಚರಣೆ, ಹಲವರ ರಕ್ಷಣೆ

ಉಡುಪಿ : ತಾಲೂಕಿನಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು ಬೈಲಕೆರೆ, ಕಲ್ಸಂಕ ಮಠದಬೆಟ್ಟು ಜಲಾವೃತಗೊಂಡಿವೆ.
ಗುಂಡಿಬೈಲುವಿನಲ್ಲಿ ನೆರೆ ನೀರು ಮನೆಗಳು ಮತ್ತು ಅಂಗಡಿಗಳಿಗೆ ನುಗ್ಗಿದ್ದ ಅಗ್ನಿಶಾಮಕ ದಳ ಐದಾರು ಮನೆಯವರನ್ನು ರಕ್ಷಣೆ ಮಾಡಿದೆ.

ಅಗ್ನಿಶಾಮಕ ದಳ ರಕ್ಷಣಾ ಕಾರ್ಯಚರಣೆ ನಡೆಸಿ ಒಂದೇ ಮನೆಯ ಮೂವರನ್ನು ರಕ್ಷಣೆ ಮಾಡಿತು. ಉಳಿದಂತೆ ಪಾಡಿಗಾರು ಸಮೀಪ ನಾಲ್ಕು ಮನೆಗಳಿಂದ ಜನರನ್ನು ಎತ್ತರ ಪ್ರದೇಶಕ್ಕೆ ಶಿಫ್ಟ್ ಮಾಡಲಾಯಿತು. ಪೊಲೀಸ್ ಅಗ್ನಿಶಾಮಕ ದಳದ ಜೊತೆಗೆ ಸಾರ್ವಜನಿಕರು ಕೂಡ ರಕ್ಷಣಾ ಕಾರ್ಯದಲ್ಲಿ ಭಾಗಿಯಾದರು. ಗುಂಡಿಬೈಲುವಿನಲ್ಲಿ ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು ಸ್ಥಳಕ್ಕೆ ನಗರಸಭೆ ಆಯುಕ್ತ ರಾಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ