ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರದಾನ

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಆಯೋಜನೆಯಲ್ಲಿ ಸಂಸ್ಕೃತಿ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಕತ್ವದಲ್ಲಿ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಳದ ಆಶ್ರಯದಲ್ಲಿ ಕವಿ ದಿ| ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ ಪ್ರದಾನ 2024, ಮಹಿಳಾ ಕಾವ್ಯ ಸಂವಾದ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ ಅಂಬಲಪಾಡಿಯ ಭವಾನಿ ಮಂಟಪದಲ್ಲಿ ನಡೆಯಿತು.

ಕವಿಗಳಾದ ವಿಜಯಪುರದ ಸುಮಿತ್ ಮೇತ್ರಿ ಹಾಗೂ ಮಂಗಳೂರಿನ ಜಯಶ್ರೀ ಬಿ. ಕದ್ರಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಾರಂಭದಲ್ಲಿ ಮಹಿಳಾ ಕಾವ್ಯ ಸಂವಾದದಲ್ಲಿ ಉಡುಪಿ ಜಿಲ್ಲೆಯ ಮಹಿಳಾ ಕವಯತ್ರಿಯರಾದ ಡಾ. ಮಾಧವಿ ಭಂಡಾರಿ, ಡಾ. ನಿಕೇತನ, ಸುಕನ್ಯಾ ಕಳಸ, ಸುಧಾ ಅಡುಕಳ, ಪೂರ್ಣಿಮಾ ಸುರೇಶ್ ಭಾಗವಹಿಸಿ ಇಂದಿನ ಮಹಿಳಾ ಬರಹಗಾರರಿಗೆ ಇರುವ ಸಮಸ್ಯೆಗಳನ್ನು ಸಂವಾದದಲ್ಲಿ ಚರ್ಚಿಸಲಾಯಿತು. ಸಂವಾದ ಕಾರ್ಯಕ್ರಮವನ್ನು ಉಪಾಧ್ಯಕ್ಷೆ ಸಂಧ್ಯಾ ಶೆಣೈ ನಿರ್ವಹಿಸಿದರು.

ಕಾವ್ಯ ಗಾಯನವನ್ನು ವಿದುಷಿ ಉಮಾಶಂಕರಿ ನಡೆಸಿಕೊಟ್ಟರು. ಇದೇ ಸಂದರ್ಭದಲ್ಲಿ ಕುರಾಡಿ ಸೀತಾರಾಮ ಅಡಿಗ ಅವರು ಬರೆದ ಪುಸ್ತಕ ಜೀವನ ರೇಖೆ ಮರು ಮುದ್ರಣವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಅವರು ಲೋಕಾರ್ಪಣೆಗೊಳಿಸಿದರು.

Related posts

ಷೇರು ವಹಿವಾಟಿನ ಬಗ್ಗೆ ಸಲಹೆ ನೀಡುವುದಾಗಿ ಯುವಕನಿಗೆ ವಂಚನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರಕ್ತಸ್ರಾವ ಅಸ್ವಸ್ಥತೆ ಚಿಕಿತ್ಸಾಲಯ ಉದ್ಘಾಟನೆ – ಆಶಾ ಕಾರ್ಯಕರ್ತರಿಗಾಗಿ ಕಾರ್ಯಾಗಾರ

ತ್ಯಾಜ್ಯ ವಿಂಗಡಣೆ ಉಲ್ಲಂಘನೆಗೆ ಕಠಿಣ ದಂಡ ವಿಧಿಸಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧಾರ