Saturday, January 18, 2025
Banner
Banner
Banner
Home » ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ : ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ; ಪೇಜಾವರ ಶ್ರೀ

ಲಡ್ಡು ಪ್ರಸಾದ ಕಲಬೆರಕೆ ಪ್ರಕರಣ : ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ; ಪೇಜಾವರ ಶ್ರೀ

by NewsDesk

ಉಡುಪಿ : ಲಡ್ಡು ಪ್ರಸಾದಕ್ಕೆ ಹಸುವಿನ ತುಪ್ಪದ ಬದಲು ಕೃತಕ ತುಪ್ಪ ಹಾಕಿದ್ದಾರೆ. ಅದನ್ನು ತುಪ್ಪ ಎಂದು ಕರೆಯಲು ಸಾಧ್ಯವಿಲ್ಲ.
ಪ್ರಾಣಿಜನ್ಯ ಕೊಬ್ಬಿನ ಮಿಶ್ರಣದಿಂದ ಪ್ರಸಾದ ತಯಾರಿಸಿದ್ದಾರೆ. ಈ ಬೆಳವಣಿಗೆಯಿಂದ ಖೇದವಾಗಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವ‌ಪ್ರಸನ್ನ ತೀರ್ಥರ ಪ್ರತಿಕ್ರಿಯೆ ನೀಡಿದ್ದಾರೆ.

ಅಯೋಧ್ಯೆಯಿಂದ ಹೇಳಿಕೆ ನೀಡಿರುವ ಪೇಜಾವರ ಶ್ರೀಗಳು, ಇದು ಹಿಂದೂ ಸಮಾಜಕ್ಕೆ ಬಗೆದಿರುವ ದೊಡ್ಡ ಅಪಚಾರ. ಇದು ದೇವರಿಗೆ ಬಗೆದಿರುವ ಅಪಚಾರ. ಸರಕಾರವೇ ಈ ಕೃತ್ಯ ನಡೆಸಿರುವುದು ಖಂಡನಾರ್ಹ. ತಿರುಪತಿಯ ಶ್ರೀನಿವಾಸ ದೇವರು, ಗೋವಿನ ರಕ್ಷಣೆಗೆ ಅವತರಿಸಿದವ. ಹಸುವನ್ನು ರಕ್ಷಿಸಿದವ ಶ್ರೀನಿವಾಸ ಅನ್ನೋದು ಇತಿಹಾಸ. ಅಂತಹ ಶ್ರೀನಿವಾಸ ದೇವರಿಗೆ ಹಸುವಿನ ಕೊಬ್ಬಿನ ಪ್ರಸಾದ ನೀಡಿದ್ದೀರಿ. ಇದೊಂದು ಅಪರಾಧವಾಗಿದೆ. ಹಿಂದುಗಳ ಧಾರ್ಮಿಕ ಶ್ರದ್ಧೆಯ ಮೇಲಿನ ಹಲ್ಲೆ ಇದು. ಮನೆಗಳಲ್ಲಿ ಕೂಡ ಇಂತಹ ತುಪ್ಪ ಬಳಸುವುದಿಲ್ಲ. ಧಾರ್ಮಿಕ ಶ್ರದ್ಧಾ ಕೇಂದ್ರಗಳು, ಸರಕಾರದ ಹಿಡಿತದಲ್ಲಿ ಇರಬಾರದು. ಶ್ರದ್ಧಾ ಕೇಂದ್ರಗಳು ಹಿಂದೂ ಸಮಾಜದ ಕೈಯಲ್ಲಿರಬೇಕು. ಸರ್ವೋಚ್ಚ ನ್ಯಾಯಾಲಯದ ತೀರ್ಪು ಕೂಡ ಇದನ್ನೇ ಹೇಳಿದೆ. ತಡ ಮಾಡದೆ ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ, ಹಿಂದೂಗಳ ಸಂಸ್ಥೆಗೆ ತಿರುಪತಿ ದೇವಾಲಯದ ಆಡಳಿತ ನೀಡಿ ಎಂದು ಒತ್ತಾಯ ಮಾಡಿದ್ದಾರೆ.

You may also like

Leave a Comment

Maax-Media-Logo

Maax News covers major news and events of Udupi district. This channel provides detailed reports on the political, social, economic, and cultural life of Udupi district.

Maax News, equipped with the most sophisticated studio in Udupi, assures people comprehensive news coverage.

Copyrights © maaxmedia.in All Rights Reserved. Designed by Sabweb