ಡಿವೈಡರ್‌ಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಕಾರು; ಪವಾಡ ಸದೃಶವಾಗಿ ಪಾರಾದ ಮಗು

ಉಡುಪಿ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಉಡುಪಿಯ ಪರ್ಕಳ ಹೈಸ್ಕೂಲ್ ಬಳಿ‌ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮಗು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದೆ.

ಮಣಿಪಾಲದಿಂದ ಆತ್ರಾಡಿಗೆ ತೆರಳುತ್ತಿದ್ದ ಲ್ಯಾಂಡ್ ರೋವರ್ ಕಾರು, ಪರ್ಕಳ ಹೈಸ್ಕೂಲ್ ಬಳಿ ತಲುಪುತ್ತಿದ್ದಂತೆ ಚಾಲಕ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆ. ಡಿವೈಡರ್ ಮೇಲಿದ್ದ ವಿದ್ಯುತ್ ಕಂಬ ಉರುಳಿಬಿದ್ದಿದ್ದು, ತಡೆಬೇಲಿ ಕಿತ್ತುಹೋಗಿದೆ. ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ