ಮತ ಎಣಿಕೆ ಕೇಂದ್ರದಲ್ಲಿ ಕೊನೆ ಕ್ಷಣದ ಸಿದ್ಧತೆ – ಜಿಲ್ಲಾಧಿಕಾರಿಯಿಂದ ಪರಿಶೀಲನೆ

ಉಡುಪಿ : ಮಂಗಳವಾರ ಸೈಂಟ್ ಸಿಸಿಲೀಸ್‌ ಶಾಲೆಯಲ್ಲಿ ನಡೆಯಲಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ಎಲ್ಲಾ ಸಿದ್ದತೆಗಳನ್ನು ಪೂರ್ಣಗೊಳಿಸಲಾಗಿದ್ದು, ಸರ್ವ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಚುನಾವಣಾ ಆಯೋಗದ ನಿರ್ದೇಶನದಂತೆ, ನಿಗದಿತ ಸಮಯಕ್ಕೆ ಸರಿಯಾಗಿ ಎಲ್ಲಾ ರೀತಿಯ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗುವುದು. ಇವಿಎಂಗಳ ಎಣಿಕೆ ನಂತರ ವಿವಿಪ್ಯಾಟ್‌ನ ಸ್ಲಿಪ್‌ಗಳ ಎಣಿಕೆ ಮಾಡಲಾಗುವುದು. ಮತ ಎಣಿಕೆಗೆ ನಿಯೋಜಿ‌ಸಿರುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು, ಪಕ್ಷಗಳ ಎಜೆಂಟರು ಸೇರಿದಂತೆ ಎಲ್ಲರಿಗೂ ಮತದಾನ ಕೇಂದ್ರದಲ್ಲಿಯೇ ಊಟ-ಉಪಹಾರ ಸೇರಿದಂತೆ ಎಲ್ಲಾ ಮೂಲಭೂತ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು.

ವಿವಿಪ್ಯಾಟ್ ಸ್ಲಿಪ್‌ಗಳ ಎಣಿಕೆ ನಂತರ ಅಂತಿಮ ಫಲಿತಾಂಶವನ್ನು ಘೋಷಿಸಲಾಗುವುದು. ಇದಕ್ಕಾಗಿ ಪ್ರತಿ ವಿಧಾನಸಭಾ ಕ್ಷೇತ್ರದ ತಲಾ ಐದರಂತೆ ಒಟ್ಟು 40 ವಿವಿ ಪ್ಯಾಟ್‌ಗಳನ್ನು ಲಾಟ್ಸ್ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅವರು ಹೇಳಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ