ಗಂಗೊಳ್ಳಿಯ ಎಲೆಕ್ಟ್ರಾನಿಕ್ಸ್ ಮಳಿಗೆಯಲ್ಲಿ ತಡರಾತ್ರಿ ಬೆಂಕಿ ಅವಘಡ – ಲಕ್ಷಾಂತರ ರೂ. ನಷ್ಟ

ಗಂಗೊಳ್ಳಿ : ಇಲ್ಲಿನ ಅಂಬಾ ಎಲೆಕ್ಟ್ರಾನಿಕ್ಸ್ ಸೆಂಟರ್‌ನಲ್ಲಿ ತಡರಾತ್ರಿ 10.30 ಸುಮಾರಿಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಮಳಿಗೆಯಲ್ಲಿದ್ದ ಎಲೆಕ್ಟ್ರಾನಿಕ್ಸ್ ಸೊತ್ತುಗಳಿಗೆ ಹಾನಿಯಾಗಿದೆ. ತಕ್ಷಣ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು.

ಸುಧಾಕರ್ ಶೆಟ್ಟಿ ಎಂಬವರಿಗೆ ಸೇರಿದ ಎಲೆಕ್ಟ್ರಾನಿಕ್ಸ್ ಶೋ ರೂಮ್ ಇದಾಗಿದೆ. ತಡರಾತ್ರಿ ಏಕಾಏಕಿ ಬೆಂಕಿ ಹತ್ತಿಕೊಂಡಾಗ ಸ್ಥಳೀಯರ ನೆರವಿನೊಂದಿಗೆ ಅಗ್ನಿಶಾಮಕ ದಳದ ಸಿಬ್ವಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಶಾರ್ಟ್ ಸರ್ಕ್ಯುಟ್‌ನಿಂದ ಈ ದುರ್ಘಟನೆ ನಡೆದಿದ್ದು ಲಕ್ಷಾಂತರ ರೂ.ಮೌಲ್ಯದ ಎಲೆಕ್ಟ್ರಾನಿಕ್ಸ್ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ