ವಿಧಾನ ಪರಿಷತ್‌ ಉಪ ಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ನಾಮಪತ್ರ ಸಲ್ಲಿಕೆ

ಮಂಗಳೂರು : ಅಕ್ಟೋಬರ್ 21‌ರಂದು ನಡೆಯಲಿರುವ ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ಕ್ಷೇತ್ರಕ್ಕೆ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ವೇಳೆ ಸಂಸದ ಕ್ಯಾ. ಬ್ರಿಜೇಶ್ ಚೌಟ, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಮುಖಂಡ ಪ್ರಮೋದ ಮಧ್ವರಾಜ್, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಕಿಶೋರ್ ಕುಮಾರ್ ಜೊತೆಗಿದ್ದರು.

ನಾಮಪತ್ರ ಸಲ್ಲಿಕೆಗೆ ತೆರಳುವ ಪೂರ್ವದಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅಭ್ಯರ್ಥಿ ಕಿಶೋರ್ ಕುಮಾರ್, ‘ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ಇಂತಹ ಅವಕಾಶ ಸಿಕ್ಕಿದೆ. ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಪಕ್ಷಕ್ಕೆ ಕಪ್ಪುಚುಕ್ಕೆ ಬರದಂತೆ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ’ ಎಂದರು.‌

ದಕ್ಷಿಣ‌ ಕನ್ನಡ, ಉಡುಪಿ ‌ಜಿಲ್ಲೆಗಳ‌ ಎಲ್ಲ ಬಿಜೆಪಿ ಶಾಸಕರು ಹಾಜರಿದ್ದರು. ನಾಮಪತ್ರ ಸಲ್ಲಿಕೆಗೆ ತೆರಳುವ ಪೂರ್ವದಲ್ಲಿ ಪಕ್ಷದ ಕಚೇರಿ ಎದುರು ಕಾರ್ಯಕರ್ತರು ಹಾರ ಹಾಕಿ ಅಭ್ಯರ್ಥಿಯನ್ನು ಅಭಿನಂದಿಸಿದರು.‌ ಚೆಂಡೆ ವಾದ್ಯ, ಕಾರ್ಯಕರ್ತರ ಜಯಘೋಷ ಮೊಳಗಿದವು.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ