ಮೂಲ್ಕಿಯಲ್ಲಿ ಮನೆಯೊಳಗೆ ನುಗ್ಗಿದ ಚಿರತೆ : ಅರಣ್ಯ ಅಧಿಕಾರಿಗಳ ಕಾರ್ಯಾಚರಣೆಯಿಂದ ಚಿರತೆ ಸೆರೆ

ಮಂಗಳೂರು : ಮನೆಯೊಳಗೆ ಏಕಾ‌ಏಕಿ ಚಿರತೆಯೊಂದು ನುಗ್ಗಿದ ಘಟನೆ ಮಂಗಳೂರು ಹೊರವಲಯದ ಮೂಲ್ಕಿಯಲ್ಲಿ ನಡೆದಿದೆ. ಮೂಲ್ಕಿಯ ಅಕ್ಕಸಾಲಿಕರ ಕೇರಿ ಬಳಿಯ ಸದಾನಂದ ಕೋಟ್ಯಾನ್ ಎಂಬವರ ಮನೆಯ ಅಡುಗೆ ಕೋಣೆಯೊಳಗೆ ಚಿರತೆ ನುಗ್ಗಿದ್ದು ಮೂಡಬಿದ್ರೆ ವಲಯದ ಅರಣ್ಯ ಅಧಿಕಾರಿಗಳ ಕಾರ್ಯಾಚರಣೆಯಿಂದ ಬೋನ್ ಮೂಲಕ ಚಿರತೆ ಸೆರೆ ಹಿಡಿಯಲಾಗಿದೆ.

ಸದಾನಂದ ಕೋಟ್ಯಾನ್‌ರ ಮನೆಯ ಅಡುಗೆ ಕೋಣೆಗೆ ಸುಮಾರು ಒಂದು ವರ್ಷ ಪ್ರಾಯದ ಚಿರತೆ ನುಗ್ಗಿದೆ. ಈ ವೇಳೆ ನಾಯಿ ಬೊಗಳಲು ಆರಂಭಿಸಿದ್ದು ಮನೆಮಂದಿ ಚಿರತೆ ನೋಡಿ ಕಂಗಾಲಾಗಿದ್ದಾರೆ.

ಕೂಡಲೇ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದು, ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಅಡುಗೆ ಮನೆಯ ಮುಂಭಾಗ ಬಾಗಿಲಿಗೆ ಬೋನ್ ಅಳವಡಿಸಿ ಸುಮಾರು 5 ಗಂಟೆಗಳ ಬಳಿಕ ಚಿರತೆ ಬೋನಿನೊಳಗೆ ಬಿದ್ದಿದೆ.

ಚಿರತೆಯನ್ನು ನೋಡಲು ಜನಸಮೂಹ ನೆರೆದಿದ್ದು, ಅರಣ್ಯಾಧಿಕಾರಿಗಳು, ಮೂಲ್ಕಿ ಪೋಲಿಸರು, ಸಾರ್ವಜನಿಕರು ಚಿರತೆ ಹಿಡಿಯಲು ಸಹಕರಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಇಂದು ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಮದುವೆ