ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಸಂಚಾರ

ಮಂಗಳೂರು : ನಗರದ ಕೆಂಜಾರಿನಲ್ಲಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪರಿಸರದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ವೇಳೆ ಚಿರತೆಯೊಂದು ವಿಮಾನ ನಿಲ್ದಾಣದ ಅಧಿಕಾರಿಗೆ ಕಾಣಸಿಕ್ಕಿದೆ.

ಅಧಿಕಾರಿಯೊಬ್ಬರು ಶುಕ್ರವಾರ ಬೆಳ್ಳಂಬೆಳಗ್ಗೆ ವೇಳೆ ಕಾರಿನಲ್ಲಿ ಬರುತ್ತಿದ್ದರು‌. ಈ ವೇಳೆ ಚಿರತೆಯೊಂದು ರಸ್ತೆ ದಾಟಿದೆ. ತಕ್ಷಣ ಅಧಿಕಾರಿ ತಮ್ಮ ಮೊಬೈಲ್‌ನಿಂದ ಚಿರತೆಯ ಫೋಟೊ ಕ್ಲಿಕ್ಕಿಸಿದ್ದಾರೆ. ಬಳಿಕ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ