ಮನೆಯಂಗಳದಲ್ಲಿ ಚಿರತೆ ಪ್ರತ್ಯಕ್ಷ; ರಾತ್ರಿ ಇಡೀ ಕಣ್ಮರೆಯಾಗಿದ್ದ ಸಾಕು ನಾಯಿ ಬದುಕುಳಿದದ್ದೇ ರೋಚಕ

ಉಡುಪಿ : ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಕಾಣಿಸಿಕೊಂಡ ಘಟನೆ ಉಡುಪಿ ಪೆರಂಪಳ್ಳಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಚಿರತೆ ಓಡಾಟದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಬೇಟೆಗಾಗಿ ಚಿರತೆ ಬಂದಿದ್ದು, ನಾಯಿಯನ್ನು‌ ಅಟ್ಟಿಸಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ನಾಯಿ ಬೊಗಳಿದರೂ ಮನೆಯವರು ಹೊರಬಂದಿಲ್ಲ. ಕೆಲವು ದಿನಗಳಿಂದ ಮಣಿಪಾಲ ಆಸುಪಾಸಿನಲ್ಲಿ ಚಿರತೆ ಓಡಾಟದ ಮಾಹಿತಿ ತಿಳಿದಿದ್ದ ಮನೆಯವರು ಸುಮ್ಮನಿದ್ದರು ಎನ್ನಲಾಗಿದೆ. ಸ್ವಲ್ಪ ಹೊತ್ತಿನಲ್ಲಿ ನಾಯಿಯ ಶಬ್ದ ಕೂಡ ಕೇಳಿರಲಿಲ್ಲ. ಬೆಳಿಗ್ಗೆ ಮನೆಯ ಸಿಸಿಟಿವಿ ದೃಶ್ಯಾವಳಿ ಗಮನಿಸಿದಾಗ ಚಿರತೆ ನಾಯಿಯ ಹಿಂದೆ ಹೋಗುತ್ತಿರುವ ದೃಶ್ಯ ಕಂಡು ಭಯಭೀತರಾಗಿದ್ದಾರೆ.

ಆದರೆ ಅಚ್ಚರಿ ಎಂಬಂತೆ ರಾತ್ರಿ ಇಡೀ ಕಣ್ಮರೆಯಾಗಿದ್ದ ಸಾಕು ನಾಯಿ ಬೆಳಿಗ್ಗೆ ಪ್ರತ್ಯಕ್ಷವಾಗಿದೆ. ಚಿರತೆಯ ಬಾಯಿಯಿಂದ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದೆ. ಈ ಘಟನೆ ಮಣಿಪಾಲ, ಪೆರಂಪಳ್ಳಿ ಭಾಗದಲ್ಲಿ ಆತಂಕ ಸೃಷ್ಟಿಸಿದೆ. ಕೂಡಲೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು, ಚಿರತೆಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ