ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವ ಮೂಲಕ ಇಂತಹ ಪ್ರಕರಣ ಮರುಕಳಿಸದಂತಾಗಲಿ : ಶುಭದ ರಾವ್‌

ಕಾರ್ಕಳ : ಹಿಂದೂ ಯುವತಿಯ ಮೇಲೆ ನಡೆದ ಅತ್ಯಾಚಾರ ಅತ್ಯಂತ ಖಂಡನೀಯ. ಈ ಘಟನೆಯಿಂದ ಇಡೀ ಸಮಾಜ ತಲೆ ತಗ್ಗಿಸುವಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಆಗ್ರಹಿಸುತ್ತೇವೆ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

View Post

ಶಾಂತಿ, ಸೌಹಾರ್ದತೆ, ಸಹಬಾಳ್ವೆ ಮತ್ತು ಸಹೋದರತೆಗೆ ಹೆಸರಾಗಿರುವ ನಮ್ಮ ಕಾರ್ಕಳದಲ್ಲಿ ಇಂತಹ ಘಟನೆ ನಡೆದಿದೆ ಎಂದರೆ ನಂಬಲು ಅಸಾಧ್ಯ. ಈ ಘಟನೆಯಿಂದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾದರೆ ಮಾತ್ರ ಇಂತಹ ಪ್ರಕರಣ ಮರುಕಳಿಸದಂತೆ ತಡೆಯಬಹುದು ಎಂದರು.

ಇತ್ತೀಚಿನ ದಿನಗಳಲ್ಲಿ ಯವಕರು ಮಾದಕ ವಸ್ತುಗಳಿಗೆ ಬಲಿಯಾಗಿ ಇಂತಹ ಪೈಶಾಚಿಕ ಕೃತ್ಯಗಳಲ್ಲಿ ತೊಡಗುವುದು ಕಂಡು ಬರುತ್ತಿದೆ. ಪೋಲೀಸ್ ಇಲಾಖೆ ಅಂಥವರನ್ನು ಪತ್ತೆ ಹಚ್ಚಿ ಮಟ್ಟ ಹಾಕುವಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಸಂತ್ರಸ್ತೆಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಅವರ ಕುಟುಂಬದ ಜೊತೆ ಕಾಂಗ್ರೆಸ್ ಪಕ್ಷ ನಿಲ್ಲಲಿದೆ ಎಂದು ಶುಭದ ರಾವ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ