Thursday, November 21, 2024
Banner
Banner
Banner
Home » “ಶಿಕ್ಷಣ ಸಂಸ್ಥೆಗೆಂದು ಸಿಎ ನಿವೇಶನ ಪಡೆದು ಬಿರಿಯಾನಿ ಮಾರುತ್ತಿರುವ ಛಲವಾದಿ ನಾರಾಯಣಸ್ವಾಮಿ ನಿವೇಶನ ವಾಪಸ್ ಮಾಡಿ ಆದರ್ಶ ಮೆರೆಯಲಿ“ – ಮಂಜುನಾಥ ಭಂಡಾರಿ

“ಶಿಕ್ಷಣ ಸಂಸ್ಥೆಗೆಂದು ಸಿಎ ನಿವೇಶನ ಪಡೆದು ಬಿರಿಯಾನಿ ಮಾರುತ್ತಿರುವ ಛಲವಾದಿ ನಾರಾಯಣಸ್ವಾಮಿ ನಿವೇಶನ ವಾಪಸ್ ಮಾಡಿ ಆದರ್ಶ ಮೆರೆಯಲಿ“ – ಮಂಜುನಾಥ ಭಂಡಾರಿ

by NewsDesk

ಬೆಂಗಳೂರು : ”ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ನಿಯಮಾನುಸಾರ ಹಂಚಿಕೆಯಾಗಿದ್ದ 5 ಎಕರೆ ಜಮೀನನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರು ಇತರರಿಗೆ ಆದರ್ಶರಾಗಿದ್ದಾರೆ. ಆದೇ ರೀತಿ ಶಿಕ್ಷಣ ಸಂಸ್ಥೆಗೆಂದು ಸಿಎ ನಿವೇಶನ ಪಡೆದು ಹೋಟೆಲ್ ತೆರೆದು ಬಿರಿಯಾನಿ ಮಾರುತ್ತಿರುವ ಛಲವಾದಿ ನಾರಾಯಣಸ್ವಾಮಿ ಅವರು ನಿವೇಶನ ಹಿಂದಿರುಗಿಸಿ ಆದರ್ಶ ಮೆರೆಯಲಿ“ ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಅಗ್ರಹಿಸಿದ್ದಾರೆ.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “5 ದಶಕಗಳಿಗೂ ಅಧಿಕ ಕಾಲ ಪರಿಶುದ್ಧ ರಾಜಕೀಯ ಜೀವನ ನಡೆಸಿಕೊಂಡು ಬಂದಿರುವ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ವಿರುದ್ಧ ಇಲ್ಲಸಲ್ಲದ ಆರೋಪ ಕೇಳಿಬರುತ್ತಿದ್ದಂತೆ ರಾಹುಲ್ ಖರ್ಗೆ ಅವರು, ನ್ಯಾಯಬದ್ಧವಾಗಿ ಲಭ್ಯವಾಗಿರುವ ಜಮೀನನ್ನು ಹಿಂದಿರುಗಿಸಿದ್ದಾರೆ. ಹೀಗಾಗಿ ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡಬಾರದು. ಅಲ್ಲದೆ ಉದ್ದೇಶಪೂರ್ವಕವಾಗಿ ವಿವಾದಕ್ಕೆ ಸಿಲುಕಿಸುವ ಪ್ರಯತ್ನವನ್ನು ಮಾಡುತ್ತಿರುವ ಪ್ರತಿಪಕ್ಷಗಳು ಇನ್ನು ಮುಂದಾದರೂ ಇಂಥ ಕೃತ್ಯದಿಂದ ಹಿಂದೆ ಸರಿಯಬೇಕು” ಎಂದಿದ್ದಾರೆ.

“ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಶಿಕ್ಷಣ ಸಂಸ್ಥೆ ಸ್ಥಾಪಿಸುವುದಾಗಿ ಕರ್ನಾಟಕ ಹೌಸಿಂಗ್ ಬೋರ್ಡ್‌ನಿಂದ ಸಿಎ ನಿವೇಶನ ಪಡೆದು ಈಗ ಆ ಜಾಗದಲ್ಲಿ ಬಿರಿಯಾನಿ ಹೋಟೆಲ್ ನಡೆಸುತ್ತಿದ್ದಾರೆ. ಈಗ ನಾರಾಯಣಸ್ವಾಮಿ ಅವರೂ ಶಿಕ್ಷಣ ಸಂಸ್ಥೆ ಸ್ಥಾಪನೆಗೆಂದು ಮಂಜೂರಾದ ಜಮೀನನನ್ನು ವಾಪಸ್ ಮಾಡಿ ರಾಹುಲ್ ಖರ್ಗೆ ಅವರಂತೆ ಆದರ್ಶರಾಗುತ್ತಾರಾ? ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ದೇವನಹಳ್ಳಿ ಸಮೀಪದ ಕೈಗಾರಿಕಾ ಪ್ರದೇಶದಲ್ಲಿ 116 ಎಕರೆ ಭೂಮಿಯನ್ನು ಕೇವಲ 50 ಕೋಟಿ ರೂ.ಗೆ ಹಂಚಿಕೆ ಮಾಡಲಾಗಿತ್ತು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಸುಮಾರು 137 ಕೋಟಿ ರೂ. ನಷ್ಟವಾಗಿದೆ. ಈಗ ಆ ಜಮೀನನ್ನು ಆರ್‌ಎಸ್‌ಎಸ್‌ನವರು ವಾಪಸ್ ಮಾಡುವ ಮೂಲಕ ಆದರ್ಶ ತೋರಿಸಲಿ” ಎಂದು ಹೇಳಿದ್ದಾರೆ.

“ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಳ್ಳಾರಿಯ ಕುವೆಂಪು ನಗರದ ಬಡಾವಣೆಯಲ್ಲಿ ನಾಗರಿಕ ಸೌಲಭ್ಯಕ್ಕೆ (ಸಿಎ) ಮೀಸಲಿಟ್ಟಿರುವ ಕೋಟ್ಯಾಂತರ ರೂ. ಬೆಲೆಬಾಳುವ ನಿವೇಶನವನ್ನು ರಾಷ್ಟ್ರೋತ್ಥಾನ ಪರಿಷತ್‌ಗೆ ಶೇ.25ರ ದರದಲ್ಲಿ 30 ವರ್ಷಗಳಿಗೆ ಗುತ್ತಿಗೆ ನೀಡಲಾಗಿತ್ತು. ಇದರಿಂದ ಸರ್ಕಾರಕ್ಕೆ 7.50 ಕೋಟಿ ರೂ. ನಷ್ಟವಾಗಿದೆ. ಈಗ ರಾಷ್ಟ್ರೋತ್ಥಾನ ಪರಿಷತ್‌ನವರು ಸಹ ಭೂಮಿಯನ್ನು ಹಿಂದಿರುಗಿಸುವರೇ?
ಬಿಜೆಪಿ ಮತ್ತು ಸಂಘ ಪರಿವಾರದವರು ರಾಜ್ಯದ ವಿವಿಧೆಡೆಯಲ್ಲಿನ ಗೋಮಾಳ ಜಾಗವನ್ನು ಮಾರುಕಟ್ಟೆ ದರಕ್ಕಿಂತ ಚಿಲ್ಲರೆ ದರಕ್ಕೆ ಮಂಜೂರು ಮಾಡಿಸಿಕೊಂಡಿದ್ದಾರೆ. ಈಗ ಆ ಎಲ್ಲಾ ಜಾಗವನ್ನು ಸರ್ಕಾರಕ್ಕೆ ಹಿಂದಿರುಗಿಸುವ ಮೂಲಕ ಬಿಜೆಪಿ ನಾಯಕರು ಮತ್ತು ಆರ್‌ಎಸ್‌ಎಸ್‌ನವರು ತಮ್ಮ ಆದರ್ಶವನ್ನು ತೋರಿಸುತ್ತಾರಾ?” ಎಂದು ಮಂಜುನಾಥ ಭಂಡಾರಿ ಪ್ರಶ್ನಿಸಿದ್ದಾರೆ.

You may also like

Leave a Comment

Maax-Media-Logo

Maax News covers major news and events of Udupi district. This channel provides detailed reports on the political, social, economic, and cultural life of Udupi district.

Maax News, equipped with the most sophisticated studio in Udupi, assures people comprehensive news coverage.

Copyrights © maaxmedia.in All Rights Reserved. Designed by Sabweb