ಆಸ್ಟ್ರೇಲಿಯಾದಲ್ಲಿ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್‌ ಶಿಪ್ : ಪುತ್ತೂರು ಅಥ್ಲೆಟಿಕ್ ಕ್ಲಬ್‌ನ ನಾಲ್ವರು ಈಜುಪಟುಗಳು ಆಯ್ಕೆ

ಪುತ್ತೂರು : ಆಗಸ್ಟ್‌ನಲ್ಲಿ ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್ನಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್ ಶಿಪ್‌ನಲ್ಲಿ ಪುತ್ತೂರು ಅಥ್ಲೆಟಿಕ್ ಕ್ಲಬ್‌ ಈಜುಪಟುಗಳಾದ ಸ್ವೀಕೃತ್ ಆನಂದ್, ಅನ್ವಿತ್ ರೈ ಬಾರಿಕೆ, ದಿಗಂತ್ ವಿ.ಎಸ್. ಹಾಗೂ ಧನ್ವಿತ್‌‌ರವರು ಭಾರತ ದೇಶದ ತಂಡವನ್ನು ಪ್ರತಿನಿಧಿಸಲಿದ್ದಾರೆ.

ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ ಲೈಫ್ ಸೇವಿಂಗ್ ಸೊಸೈಟಿಯ(ಆ‌ಲ್ 19ರ ತನಕ ನಡೆದ ಭಾರತ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಇವರು ಭಾಗವಹಿಸಿ ಭಾರತದ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಮಂಗಳೂರಿನ ಆಲೋಷಿಯಸ್ ಈಜುಕೊಳ ಹಾಗೂ ಪರ್ಲಡ್ಕ ಬಾಲವನದ ಈಜುಕೊಳದಲ್ಲಿ ಪುತ್ತೂರು ಅಥ್ಲೆಟಿಕ್ ಕ್ಲಬ್‌ನ ಹಿರಿಯ ತರಬೇತುದಾರರಾಗಿರುವ ಪಾರ್ಥ ವಾರಣಾಸಿ, ನಿರೂಪ್ ಜಿ.ಆರ್. ರೋಹಿತ್ ಪಿ. ಹಾಗೂ ದೀಕ್ಷಿತ್‌‌ರವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ