ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಮದ್ಯ ವಶ

ಕಾರ್ಕಳ : ಕಾರ್ಕಳ ತಾಲೂಕಿನ ಬೋಳ ಎಂಬಲ್ಲಿ ಅಬಕಾರಿ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಮದ್ಯದ ಬಾಕ್ಸ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಯಾಚರಣೆ ವೇಳೆ ಲಕ್ಷಾಂತರ ರೂ. ಮೌಲ್ಯದ ಸುಮಾರು 260ಕ್ಕೂ ಅಧಿಕ ಮದ್ಯದ ಬಾಕ್ಸ್‌ಗಳು ಪತ್ತೆಯಾಗಿವೆ. ಅಬಕಾರಿ ಅಧಿಕಾರಿಗಳು ಅದನ್ನು ಜಪ್ತಿ ಮಾಡಿ ಕಾರ್ಕಳ ಅಬಕಾರಿ ಇಲಾಖೆಯಲ್ಲಿ ದಾಸ್ತಾನಿರಿಸಿದ್ದಾರೆ. ಇವೆಲ್ಲವೂ ಬ್ರ್ಯಾಂಡೆಡ್‌ ಮಾಲ್‌ಗಳಾದ ಜಾನಿ ವಾಕರ್‌, ಬ್ಲಾಕ್‌ ಲೇಬಲ್‌, ಬ್ಲ್ಯಾಕ್‌ ಆಂಡ್‌ ವೈಟ್‌, ಮ್ಯಾನ್ಶನ್‌ ಹೌಸ್ (MH), ಮ್ಯಾಕ್‌‌ಡವೆಲ್‌ (MC), ವೋಡ್ಕ ಲೇಬಲ್‌ನ ನಕಲಿ ಮದ್ಯವಾಗಿದೆ. ಆರೋಪಿಗಳು ಪರಾರಿಯಾಗಿದ್ದು, ಅಬಕಾರಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಮತ್ತು ನಕಲಿ ಮದ್ಯ ತಯಾರಿಕೆ, ರವಾನೆ‌ ಹೇಗೆ ನಡೆಯುತ್ತಿದೆ ಎನ್ನುವುದರ ಕುರಿತು ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತೆ ಬಿಂದುಶ್ರೀ ತಂಡ ತನಿಖೆ ನಡೆಸುತ್ತಿದೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ