ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್‌ಡೆತ್ ಪ್ರಕರಣ – ಪ್ರಕರಣದ ತನಿಖೆಗೆ ಸಿಐಡಿ ಪೊಲೀಸರ ಎಂಟ್ರಿ

ಬ್ರಹ್ಮಾವರ : ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದ ತನಿಖೆ ಚುರುಕುಗೊಂಡಿದ್ದು ಪ್ರಕರಣದ ತನಿಖೆಗೆ ಸಿಐಡಿ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ.

ಬೆಂಗಳೂರಿನಿಂದ ಉಡುಪಿಗೆ ತಲುಪಿರುವ ಸಿಐಡಿ ಪೊಲೀಸರ ತಂಡವು, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಮಾಹಿತಿ ಸಂಗ್ರಹಿಸುವ ಕಾರ್ಯ ಕೈಗೊಂಡಿದೆ. ಬಳಿಕ ಬ್ರಹ್ಮಾವರ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮೃತ ದೇಹ ಪರಿಶೀಲನೆ ನಡೆಸಿ ವೈದ್ಯಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿತು. ಮೃತದೇಹವನ್ನು ಮಣಿಪಾಲ ಕೆಎಂಸಿಯಲ್ಲಿ ಇಂದು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳದಿಂದ ಮೃತರ ಮನೆಯವರು ಈಗಾಗಲೇ ಬ್ರಹ್ಮಾವರ ತಲುಪಿದ್ದು ಅಧಿಕೃತ ದೂರು ನೀಡಿದ್ದಾರೆ.

ಮಹಿಳೆ ಹಾಗೂ ಮಕ್ಕಳಿಗೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಆರೋಪಿ ಕೇರಳ ರಾಜ್ಯದ ಕೊಲ್ಲಂ ಮೂಲದ ಬಿಜು ಮೋಹನ್ ವಿರುದ್ಧ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಆತನನ್ನು ವಿಚಾರಣೆಗಾಗಿ ಠಾಣೆಗೆ ಕರೆತಂದು ಠಾಣೆಯ ಲಾಕಪ್‌ನಲ್ಲಿ ಇರಿಸಲಾಗಿತ್ತು. ಭಾನುವಾರ ನಸುಕಿನ ವೇಳೆ ಲಾಕಪ್‌ನಲ್ಲೇ ಆತ ಮೃತಪಟ್ಟಿದ್ದ.

Related posts

ಕೇರಳಕ್ಕೆ ವಿದ್ಯುತ್ ಸರಬರಾಜು ಕಾಮಗಾರಿಗೆ ವಿರೋಧ – ಬರಿಗೈಯಲ್ಲಿ ವಾಪಾಸಾದ ಅಧಿಕಾರಿಗಳು

ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ಹೆಗಡೆ ನಿಧನ

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 125ನೇ ಗ್ರಂಥಾಲಯ! ಗಮನ ಸೆಳೆದ ಕಸಾಪ ಅಭಿಯಾನ