ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ – ಸಿಐಡಿ ತನಿಖೆ ಚುರುಕು

ಬ್ರಹ್ಮಾವರ : ಬ್ರಹ್ಮಾವರ ಪೊಲೀಸ್ ಸ್ಟೇಷನ್‌ನಲ್ಲಿ ಸಂಭವಿಸಿದ್ದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಚುರುಕುಗೊಂಡಿದೆ.

ಕೇರಳ ರಾಜ್ಯದ ಕೊಲ್ಲಂನ ಬಿಜು ಮೋಹನ್ ಎಂಬಾತ ಲಾಕಪ್‌ನಲ್ಲಿ ಕೊನೆಯುಸಿರೆಳೆದಿದ್ದ. ಕೇರಳದ ಕೊಲ್ಲಂನಿಂದ ಬ್ರಹ್ಮಾವರಕ್ಕೆ ಆಗಮಿಸಿರುವ ಮೃತ ಬಿಜು ಸಂಬಂಧಿಕರು ಸಾವಿನ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೃತ ದೇಹದ ಮರಣೋತ್ತರ ಪರೀಕ್ಷೆ ಮಣಿಪಾಲದ ಕೆಎಂಸಿಯಲ್ಲಿ ನಡೆದಿದ್ದು, ಸಂಬಂಧಿಕರು ಮೃತದೇಹವನ್ನು ತಮ್ಮ ಊರಾದ ಕೊಲ್ಲಂಗೆ ಕೊಂಡೊಯ್ದಿದ್ದಾರೆ. ಬೆಂಗಳೂರಿಂದ ಆಗಮಿಸಿರುವ ಸಿಐಡಿ ತಂಡ ಸಾವಿನ ಬಗ್ಗೆ ಮಾಹಿತಿ ಕಲೆಹಾಕಿದ್ದು ತನಿಖೆ ಮುಂದುವರೆದಿದೆ ಎಂದು ಉಡುಪಿ ಎಸ್ಪಿ ಅರುಣ್ ಕೆ. ಮಾಹಿತಿ ನೀಡಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ