ಬೈಂದೂರು ಅರಣ್ಯಾಧಿಕಾರಿ ಮತ್ತು ಅರಣ್ಯ ವೀಕ್ಷಕ ಲೋಕಾಯುಕ್ತ ಬಲೆಗೆ

ಬೈಂದೂರು : ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಬೈಂದೂರು ವಲಯದ ಉಪವಲಯ ಅರಣ್ಯ ಅಧಿಕಾರಿ ಬಂಗಾರಪ್ಪ ಮತ್ತು ಅರಣ್ಯ ವೀಕ್ಷಕ ವಿನಾಯಕ್‌ರನ್ನು ಬಲೆಗೆ ಕೆಡವಿದ್ದಾರೆ. ಆರೋಪಿಗಳ ಪೈಕಿ ಬಂಗಾರಪ್ಪನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದು ಮತ್ತೋರ್ವ ಆರೋಪಿ ವಿನಾಯಕ ನಾಪತ್ತೆಯಾಗಿದ್ದಾನೆ.

ಇವರಿಬ್ಬರು ಹಲಸಿನ ಮರವನ್ನು ತೆರವುಗೊಳಿಸಲು ಅನುಮತಿ ನೀಡುವುದಕ್ಕಾಗಿ 4000 ರೂ. ಲಂಚ ಕೇಳಿದ್ದರು. ಮರ ತೆರವು ಮಾಡಲು ಪಿರ್ಯಾದಿದಾರ ಮಹಮ್ಮದ್ ಅನ್ವರ್ ಹಸನ್ ಅರ್ಜಿ ಸಲ್ಲಿಸಿದ್ದರು. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ನಟರಾಜ್ ಎಂ ಎ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಡಿವೈಎಸ್ಪಿ ಪ್ರಕಾಶ್ ಕೆ ಸಿ, ಮತ್ತು ಪೊಲೀಸ್ ನಿರೀಕ್ಷಕ ಮಂಜುನಾಥ್ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ