ಗಣಿ ಭೂವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿ ಮನೆ-ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು : ನಗರದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಹಾಗೂ ಕಚೇರಿಗಳ ಮೇಲೆ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಮಂಗಳೂರು ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳ ತಂಡ ಮಂಗಳೂರಿನ ವೆಲೆನ್ಸಿಯಾದಲ್ಲಿರುವ‌ ಕೃಷ್ಣವೇಣಿಯವರ ಮನೆ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳ ತಂಡ ಮೂರು ವಾಹನಗಳಲ್ಲಿ ಆಗಮಿಸಿ ಕಚೇರಿ ಮತ್ತು ಮನೆಯ ಮೇಲೆ ದಾಳಿ ನಡೆಸಿದೆ.

ಕೃಷ್ಣವೇಣಿಯವರು ಎರಡು ತಿಂಗಳ ಹಿಂದೆಯಷ್ಟೇ ಮಂಗಳೂರಿನ ಗಣಿ ಹಾಗೂ ಭೂವಿಜ್ಞಾನ ಇಲಾಖೆಯ ಅಧಿಕಾರಿಯಾಗಿ ಮಂಗಳೂರಿಗೆ ವರ್ಗಾವಣೆಯಾಗಿ ಬಂದಿದ್ದರು. ಇಂದು ಬೆಳ್ಳಂಬೆಳಗ್ಗೆ ಲೋಕಾ ಅಧಿಕಾರಿಗಳು ವೇಲೆನ್ಸಿಯಾದಲ್ಲಿರುವ ಅಪಾರ್ಟ್ಮೆಂಟ್ ಕೃಷ್ಣವೇಣಿಯವರ ನಿವಾಸ ಹಾಗೂ ಮಲ್ಲಿಕಟ್ಟೆಯಲ್ಲಿರುವ ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ