ಷೇರು ವ್ಯವಹಾರದಲ್ಲಿ ನಷ್ಟ – ಮಾಜಿ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಕಾರ್ಕಳ : ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದ ಬ್ಯಾಂಕಿನ ಮಾಜಿ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಮಣ್ ಗ್ರಾಮದಲ್ಲಿ ಸಂಭವಿಸಿದೆ.

ಮೃತರನ್ನು ಬೆಳ್ಳಣ್ ಗ್ರಾಮದ ದಿನೇಶ್ ಎಂ.(34) ಎಂದು ಗುರುತಿಸ ಲಾಗಿದೆ. ಮೃತರು ಕರ್ನಾಟಕ ಬ್ಯಾಂಕ್‌ನ ಉದ್ಯೋಗಿಯಾಗಿದ್ದು ಎರಡು ತಿಂಗಳ ಹಿಂದೆ ತನ್ನ ಹುದ್ದೆಗೆ ರಾಜೀನಾಮೆ ನೀಡಿ ಮನೆಯಲ್ಲಿ ಇದ್ದರು. ತದನಂತರ ಅವರು ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದರು. ಈ ವಿಚಾರವಾಗಿ ಮಾನಸಿಕವಾಗಿ ನೊಂದ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ