ಕರ್ಕಶ ಹಾರ್ನ್ ತೆರವು ಕಾರ್ಯಾಚರಣೆ – ಟ್ರಾಫಿಕ್ ಪೊಲೀಸರಿಂದ ದಂಡ ವಸೂಲಿ

ಉಡುಪಿ : ಉಡುಪಿ ಸಂಚಾರ ಪೊಲೀಸರು ಕಾರ್ಯಾಚರಣೆ ನಡೆಸಿ ಉಡುಪಿ ಸಿಟಿ ಬಸ್‌ಗಳ ಕರ್ಕಶ ಹಾನ್‌ಗಳನ್ನು ತೆರವುಗೊಳಿಸಿ ದಂಡ ವಿಧಿಸಲಾಯಿತು.

ಜೂನ್ 3ರಂದು ಉಡುಪಿ ಸಂಚಾರ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದ ಸಭೆಯಲ್ಲಿ ಉಡುಪಿಯ ಸಿಟಿ ಹಾಗೂ ಸರ್ವಿಸ್ ಬಸ್‌ಗಳಲ್ಲಿ ಅಳವಡಿಸಲಾದ ಕರ್ಕಶ ಹಾರ್ನ್‌ಗಳನ್ನು ಜೂನ್ 15ರೊಳಗೆ ಕಡ್ಡಾಯವಾಗಿ ತೆರವುಗೊಳಿಸುವಂತೆ ಸೂಚನೆ ನೀಡಲಾಗಿತ್ತು.

ಅದರಂತೆ ಗಡುವು ಮುಗಿದ ಹಿನ್ನೆಲೆಯಲ್ಲಿ ಉಡುಪಿ ಸಂಚಾರ ಪೊಲೀಸ್‌ ಠಾಣೆಯ ಎಸ್ಸೈ ಸುದರ್ಶನ್ ನೇತೃತ್ವದಲ್ಲಿ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿ ಸುಮಾರು ಏಳು ಬಸ್‌ಗಳಲ್ಲಿದ್ದ ಕರ್ಕಶ ಹಾರ್ನ್‌ಗಳನ್ನು ತೆರವುಗೊಳಿಸಲಾಯಿತು. ಬಸ್‌ಗಳ ವಿರುದ್ಧ ತಲಾ 500ರೂ.ನಂತೆ ಒಟ್ಟು 3500ರೂ. ದಂಡ ವಿಧಿಸಲಾಯಿತು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ