ಕನ್ನಡ ಭಾಷೆಯ ಬಗೆಗಿನ ಒಲವು ಎಲ್ಲರಲ್ಲೂ ಮೂಡಬೇಕು – ಜನಾರ್ದನ್ ಕೊಡವೂರು ​

ಉಡುಪಿ: ಕನ್ನಡ ಭಾಷೆಯ ಬಗೆಗಿನ ಒಲವು ಸಾಹಿತ್ಯ ಸಂಸ್ಕೃತಿಯ ಅಭಿಮಾನ ಎಲ್ಲರಲ್ಲೂ ಮೂಡಬೇಕು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ, ಭಾರತ ಸ್ಕೌಟ್ ಜಿಲ್ಲಾ ಆಯುಕ್ತ ಜನಾರ್ದನ್ ಕೊಡ​ವೂರು ತಿಳಿಸಿದರು. ಅವರು ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಮಾಸದ ಸಂಭ್ರಮಾಚರಣೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು

ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ದೇವಿದಾಸ್ ಎಸ್ ನಾಯ್ಕ ಕನ್ನಡ ಭಾಷೆ​, ನಾಡು, ನುಡಿಯ ಬಗ್ಗೆ ಚಿಂತನೆ ನಡೆಸಿದರು.​ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕವನ ಹಾಗೂ ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಸಂಯೋಜಕಿ ಕನ್ನಡ ವಿಭಾಗದ ಕುಮಾರಿ ದೀಪಿಕಾ ಉಪಸ್ಥಿತರಿದ್ದರು.​ ಶ್ರೀಕರ ಕಾರ್ಯಕ್ರಮ ನಿರೂಪಿಸಿದರು. ಭೂಮಿಕ ಸ್ವಾಗತಿಸಿ, ದಿಶಾ ರಾವ್ ಅತಿಥಿಗಳ ಪರಿಚಯ ಮಾಡಿದರು. ಮಾಧುರ್ಯ ವಂದನಾರ್ಪಣೆಗೈದರು.

Related posts

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours