ಮಹಾಲಕ್ಷ್ಮಿ ಬ್ಯಾಂಕ್ ಅವ್ಯವಹಾರ ಆರೋಪ – ದೇವಸ್ಥಾನದಲ್ಲಿ ಆಣೆ ಪ್ರಮಾಣ!

ಉಡುಪಿ : ಉಡುಪಿಯ ಮಹಾಲಕ್ಷ್ಮಿ ಬ್ಯಾಂಕ್‌ನಲ್ಲಿ‌ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪ ಪ್ರಕರಣ ಇಂದು ದೇವಸ್ಥಾನದ ಅಂಗಳ ತಲುಪಿದೆ.

ಉಡುಪಿಯ ಕರಂಬಳ್ಳಿ ವೆಂಕಟ್ರಮಣ ದೇವಸ್ಥಾನದಲ್ಲಿ ಇಂದು ಆಣೆ ಪ್ರಮಾಣಕ್ಕೆ ದಿನ ನಿಗದಿಯಾಗಿತ್ತು. ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಮಾಜಿ ಶಾಸಕ ರಘುಪತಿ ಭಟ್ ಅವರು ಆರೋಪ ಮಾಡಿದ್ದರು. ಆರೋಪಕ್ಕೆ ಪ್ರತಿಯಾಗಿ ಬ್ಯಾಂಕ್‌ನ ಅಧಿಕಾರಿ ಆಣೆ ಪ್ರಮಾಣಕ್ಕೆ ಆಹ್ವಾನ ನೀಡಿದ್ದರು. ಈ ಆಹ್ವಾನಕ್ಕೆ ಒಪ್ಪಿದ್ದ ಮಾಜಿ ಶಾಸಕ ರಘುಪತಿ ಭಟ್ ಇಂದು ದಿನ ನಿಗದಿಪಡಿಸಿದ್ದರು. ಅದರಂತೆ ದೇವಸ್ಥಾನಕ್ಕೆ ಬ್ಯಾಂಕ್‌ನಲ್ಲಿ ಸಾಲ ಪಡೆದವರ ಜೊತೆ ಮಾಜಿ ಶಾಸಕ ರಘುಪತಿ ಭಟ್ ಆಗಮಿಸಿದರು.

ಮತ್ತೊಂದೆಡೆ ಮಹಾಲಕ್ಷ್ಮಿ ಬ್ಯಾಂಕ್ ಅಧಿಕಾರಿಗಳು ಕೂಡ ಆಗಮಿಸಿದರು. ಆದರೆ ಆಣೆ ಪ್ರಮಾಣ ಬದಲು ಎರಡೂ ಕಡೆಯವರು ದೇವಸ್ಥಾನದಲ್ಲಿ‌ ಪ್ರಾರ್ಥನೆಯನ್ನು ನೆರವೇರಿಸಿದರು. ದೇವಸ್ಥಾನದ ಕಡೆಯವರು, ಆಣೆ ಪ್ರಮಾಣಕ್ಕೆ ಅವಕಾಶ ನೀಡಿರಲಿಲ್ಲ. ಇದಕ್ಕೆ ಒಪ್ಪಿದ ಎರಡೂ ಕಡೆಯವರು ಪ್ರಾರ್ಥನೆ ಸಲ್ಲಿಸಿ ಅಲ್ಲಿಂದ ತೆರಳಿದರು. ಒಟ್ಟಾರೆ ಮಹಾಲಕ್ಷ್ಮಿ ಬ್ಯಾಂಕ್‌ನ ಅವ್ಯವಹಾರ ಆರೋಪ ಈಗ ದೇವಸ್ಥಾನದ ಅಂಗಳ ತಲುಪಿದಂತಾಗಿದ್ದು ಮುಂದೆ ಏನಾಗುತ್ತೋ ಕಾದು ನೋಡಬೇಕು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ