ಮಹಾರಾಷ್ಟ್ರ ಚುನಾವಣೆ – ಪುಣೆಯಲ್ಲಿ ಶಾಸಕ ಕಾಮತ್ ಸಭೆ

ಮಂಗಳೂರು : ಮಹಾರಾಷ್ಟ್ರ ಚುನಾವಣೆ ನಿಮಿತ್ತ ಇದೇ ನವಂಬರ್ 12ರಂದು ಪುಣೆಯಲ್ಲಿ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತು ನಡೆದ ನಗರ ಸೇವಕರ (ಪಾಲಿಕೆ ಸದಸ್ಯರು) ವಿಶೇಷ ಸಭೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್‌ರವರು ಭಾಗವಹಿಸಿದರು.

ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವರು ಹಾಗೂ ಪುಣೆಯ ಸಂಸದರಾದ ಶ್ರೀ ಮುರಳೀಧರ್ ಮೊಹೋಲ್ ರವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಮುಂಬರುವ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಸೇರಿದಂತೆ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಹಲವು ಸುತ್ತಿನ ಚರ್ಚೆ ನಡೆಯಿತು. ಶಾಸಕ ಕಾಮತ್‌ರವರು ಪ್ರಸ್ತುತ ಪುಣೆಯಲ್ಲಿದ್ದು ಪಾರ್ವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಈ ಸಂದರ್ಭದಲ್ಲಿ ಪಾರ್ವತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಪ್ರಶಾಂತ್ ದಿವಾಕರ್, ಕ್ಷೇತ್ರದ ಹಾಲಿ ಶಾಸಕಿ ಹಾಗೂ ಬಿಜೆಪಿ ಅಭ್ಯರ್ಥಿ ಮಾಧುರಿ ಮಿಸಾಲ್, ಎಲ್ಲಾ ನಗರ ಸೇವಕರು ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.

Related posts

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಸಿಂಧೂರ್ ಕಾರ್ಯಾಚರಣೆ ಯಶಸ್ವಿ – ಶಾಸಕರ ನೇತೃತ್ವದಲ್ಲಿ ವಿಶೇಷ ಪೂಜೆ

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಅರೆಸ್ಟ್