ಮಳಲಿ ಮಸೀದಿ ವಿವಾದ ಪ್ರಕರಣ – ವಿಎಚ್‌ಪಿ ಅರ್ಜಿ ತಿರಸ್ಕೃತ

ಮಂಗಳೂರು : ಮಳಲಿ ಮಸೀದಿಯ ಜಮೀನಿನ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿರುವ ಅರ್ಜಿಯನ್ನು ಮಂಗಳೂರಿನ ಸಹಾಯಕ ಆಯುಕ್ತರ ನ್ಯಾಯಾಲಯವು ತಿರಸ್ಕರಿಸಿದೆ.

ಈ ಹಿಂದೆ ಮಸೀದಿ ಇರುವ ಸ್ಥಳದ ಆರ್‌ಟಿಸಿಯ ಕಲಂ 9ರಲ್ಲಿ ಕಂದಾಯ ಭೂಮಿ ಎಂದು ಉಲ್ಲೇಖಿಸಲಾಗಿತ್ತು. ಇತ್ತೀಚೆಗೆ ರಾಜ್ಯದ ಹಲವೆಡೆ ಉಂಟಾಗಿರುವ ವಕ್ಫ್ ವಿವಾದ ಹಿನ್ನೆಲೆಯಲ್ಲಿ ಅನುಮಾನ ವ್ಯಕ್ತವಾಗಿ ಮಳಲಿ ಮಸೀದಿ ಬಗ್ಗೆಯೂ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈ ಹಿಂದಿನ ದಾಖಲೆಯನ್ನು ಬದಲಾಯಿಸಬಾರದು. ಈ ಬಗ್ಗೆ ಸಿವಿಲ್‌ ನ್ಯಾಯಾಲಯದಲ್ಲಿರುವ ವ್ಯಾಜ್ಯ ತೀರ್ಮಾನ ಆಗುವವರೆಗೂ ಯಾವುದೇ ಪ್ರಕ್ರಿಯೆ ನಡೆಸಬಾರದು ಎಂದು ವಿಹಿಂಪ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.

ವಿಎಚ್‌ಪಿ ಸಲ್ಲಿಸಿರುವ ಅರ್ಜಿಯನ್ನು ಸಹಾಯಕ ಆಯುಕ್ತರು ತಿರಸ್ಕರಿಸಿದ್ದಾರೆ. ಆದ್ದರಿಂದ ನಾವು ಹೈಕೋರ್ಟ್‌ ಮೆಟ್ಟಿಲೇರಿದ್ದೇವೆ ಎಂದು ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ತಿಳಿಸಿದ್ದಾರೆ.

Related posts

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar

ಯಕ್ಷಗಾನ ಹಾಸ್ಯಗಾರ ಮುಖ್ಯಪ್ರಾಣ ಕಿನ್ನಿಗೋಳಿ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ